ಪ್ರಧಾನಿಯಿಂದ ಎಲ್‌ಪಿಜಿ ಪೈಪ್‌ಲೈನ್ ಉದ್ಘಾಟನೆ: ಬಿಹಾರ, ಪೂರ್ವ ಭಾರತದ ಅಭಿವೃದ್ಧಿಗೆ ಬದ್ಧವಿರುವುದಾಗಿ ಪುನರುಚ್ಛಾರ
ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ಅನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಪಾಟ್ನಾ: ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ಅನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಎಲ್ ಪಿ ಜಿ ಪೈಪ್ ಲೈನ್ , ಬಂಕಾ ಹಾಗೂ ಪೂರ್ವ ಚಂಪಾರಣ್ ನಲ್ಲಿ ಎರಡು ಎಲ್ ಪಿಜಿ ಬಾಟ್ಲಿಂಗ್ ಸ್ಥಾವರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಬಿಹಾರ ಮತ್ತು ಪೂರ್ವ ಭಾರತದ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಬಿಹಾರ ಮತ್ತು ಪೂರ್ವ ಭಾಗದ ಪ್ರದೇಶಗಳು ಅಭಿವೃದ್ಧಿ ಹೊಂದದ ಹೊರತು ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಸಾಧ್ಯವಿಲ್ಲ ಎಂದು ತಾವು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿರುವುದಾಗಿ ಅವರು ಹೇಳಿದ್ದಾರೆ.
ಕೊರೊನವೈರಸ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಅನೇಕ ತೊಂದರೆಗಳು ಎದುರಾದರೂ ನಿಗದಿತ ಸಮಯದಲ್ಲಿ ಇಂದು ಉದ್ಘಾಟಿಸಿದ ಎಲ್ ಪಿಜಿ ಯೋಜನೆಗಳು ಪೂರ್ಣಗೊಂಡಿವೆ. ಕೋಟ್ಯಂತರ ರೂ ವೆಚ್ಚದ ಈ ಯೋಜನೆಗಳು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಖಂಡಿತವಾಗಿಯೂ ನೆರವಾಗುತ್ತವೆ. ಎಲ್ ಪಿಜಿ ಯೋಜನೆಗಗಳು ಪೂರ್ಣಗೊಂಡ ನಂತರ ಬಿಹಾರ ಅಭಿವೃದ್ಧಿಯಾಗಲಿದ್ದು ಮತ್ತು ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
ಎಲ್ ಪಿಜಿ ಯೋಜನೆಗಳು ಪೂರ್ಣಗೊಂಡ ನಂತರ ಬಿಹಾರದಲ್ಲಿ ಅನಿಲ ಆಧಾರಿತ ಆರ್ಥಿಕತೆ ವೃದ್ಧಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲೂ ಬಿಹಾರದಲ್ಲಿ ಅಭಿವೃದ್ಧಿಯ ವೇಗ ಅಡೆತಡೆಯಿಲ್ಲದೆ ಮುಂದುವರಿದಿದೆ. ಸಂಕಷ್ಟದ ಈ ಹಂತದಲ್ಲಿ ರಾಜ್ಯದ ಜನರು ದುಡಿದಿರುವುದು ಇದು ನಿಜಕ್ಕೂ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


