ರಾಜ್ಯಸಭಾ ಉಪಾಧ್ಯಕ್ಷ ಹುದ್ದೆ: ಜೆಡಿಯು ಅಭ್ಯರ್ಥಿ ಹರಿವಂಶ್ ಗೆ ಬಿಜೆಡಿ ಬೆಂಬಲ
ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿದ ನಂತರ, ರಾಜ್ಯಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಯು ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿದ ನಂತರ, ರಾಜ್ಯಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಯು ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.
ನಿತೀಶ್ ಕುಮಾರ್ ಅವರು ದೂರವಾಣಿ ಮೂಲಕ ತಮ್ಮೊಂದಿಗೆ ಮಾತನಾಡಿದ ನಂತರ ನವೀನ್ ಪಟ್ನಾಯಕ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.
ನಿತೀಶ್ ಕುಮಾರ್ ಅವರು ನವೀನ್ ಪಟ್ನಾಯಕ್ ಅವರಿಗೆ ಸೆಪ್ಟೆಂಬರ್ 10 ರಂದು ಕರೆ ಮಾಡಿದ್ದರು ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹುದ್ದೆಗೆ ಜೆಡಿಯು ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದ್ದರು.
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ಹಾಜರಾಗುವಂತೆ ಬಿಜೆಡಿ ತನ್ನ ರಾಜ್ಯಸಭಾ ಸದಸ್ಯರಿಗೆ ವಿಪ್ ನೀಡಿತ್ತು. ರಾಜ್ಯಸಭೆಯಲ್ಲಿ ಬಿಜೆಡಿಗೆ ಒಂಬತ್ತು ಸದಸ್ಯರನ್ನು ಹೊಂದಿದೆ.
2018 ರಲ್ಲಿ ನಡೆದ ರಾಜ್ಯಸಭಾ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಡಿ ಹರಿವಂಶ್ ಅವರನ್ನು ಬೆಂಬಲಿಸಿತ್ತು. ರಾಜ್ಯಸಭಾ ಉಪಾಧ್ಯಕ್ಷರಾಗಿರುವ ಹರಿವಂಶ್ ಅವರ ಅವಧಿ ಈ ವರ್ಷದ ಏಪ್ರಿಲ್ 9 ರಂದು ಮುಕ್ತಾಯಗೊಂಡಿದ್ದು, ಅಂದಿನಿಂದ ಈ ಹುದ್ದೆ ಖಾಲಿಯಾಗಿದೆ. ಈಗ ಹರಿವಂಶ್ ಅವರು ಮತ್ತೆ ರಾಜ್ಯಸಭೆ ಉಪಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದು, ಅವರ ವಿರುದ್ಧ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಭ್ಯರ್ಥಿ ಮನೋಜ್ .ಜಾ ಅವರು ಸ್ಪರ್ಧಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


