ಯುಜಿಸಿ-ನೆಟ್ ಪರೀಕ್ಷೆ ಸೆಪ್ಟೆಂಬರ್ 24ಕ್ಕೆ ಮುಂದೂಡಿಕೆ
ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್)ಯ ಪರೀಕ್ಷೆಯ ದಿನದಂದೇ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಯ ದಿನಾಂಕ ನಿಗದಿಯಾಗಿರುವುದರಿಂದ, ನೆಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಮುಂದೂಡಿದೆ.

ನವದೆಹಲಿ: ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್)ಯ ಪರೀಕ್ಷೆಯ ದಿನದಂದೇ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಯ ದಿನಾಂಕ ನಿಗದಿಯಾಗಿರುವುದರಿಂದ, ನೆಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಮುಂದೂಡಿದೆ.
ಈ ಹಿಂದೆ ಸೆಪ್ಟೆಂಬರ್ 16ರಿಂದ 25ರವರೆಗೆ ನೆಟ್ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಈ ಪರೀಕ್ಷೆಯನ್ನು ಸೆಪ್ಟೆಂಬರ್ 24ರಿಂದ ಆರಂಭಿಸಲು ಎನ್‌ಟಿಎ ನಿರ್ಧರಿಸಿದೆ.
‘ಐಸಿಎಆರ್ ಪರೀಕ್ಷೆಗಳನ್ನು ಸೆ16ರಿಂದ 23ರವರೆಗೆ ಎನ್‌ಟಿಎ ನಡೆಸಲಿದೆ. ಈ ಕಾರಣದಿಂದಾಗಿ ಸೆ.24ರಿಂದ ಯುಜಿಸಿ–ನೆಟ್ 2020ರ ಪರೀಕ್ಷೆಗಳು ಆರಂಭವಾಗಲಿವೆ’ ಎಂದು ಎನ್‌ಟಿಎ ಹಿರಿಯ ನಿರ್ದೇಶಕಿ ಸಾಧನಾ ಪರಶಾರ್ ಹೇಳಿದ್ದಾರೆ.
ಶೀಘ್ರದಲ್ಲೇ ವಿಷಯವಾರು ದಿನಾಂಕ, ಅವಧಿಯನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜೂನ್‌ನಲ್ಲಿ ನಡೆಯಬೇಕಿದ್ದ ನೆಟ್ ಪರೀಕ್ಷೆಯನ್ನು ಲಾಕ್‌ಡೌನ್ ಕಾರಣದಿಂದಾಗಿ ಎನ್‌ಟಿಎ ಮುಂದೂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


