ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 83,809 ಹೊಸ ಸೋಂಕು ಪ್ರಕರಣಗಳು ಪತ್ತೆ, 1,054 ಸಾವು!
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,054 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,054 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 49,30,237ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಟ್ಟಾರೆ 38,59,400 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,054 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,90,061 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಶೇ.1.64ಕ್ಕೆ ಕುಸಿದ ಕೊರೋನಾ ಮರಣ ಪ್ರಮಾಣ
ಇನ್ನು ದೇಶದಲ್ಲಿನ ಕೊರೋನಾ ಮರಣ ಪ್ರಮಾಣ ಶೇ.1.64ಕ್ಕೆ ಕುಸಿತಗೊಂಡಿದ್ದು, ಜಗತ್ತಿನ ಯಾವುದೇ ದೇಶಕ್ಕೆ ಹೊಲಿಸಿದರೂ ಭಾರತದ ಪ್ರಮಾಣ ಪ್ರಮಾಣ ಕಡಿಮೆ ಇದೆ. ಇದನ್ನು ಶೇ.1ಕ್ಕಿಂತ ಕಡಿಮೆ ತರುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಸಂಬಂಧ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಂತೆಯೇ ಜಾಗತಿಕ ಕೊರೋನಾ ಸೋಂಕು ಮರಣ ಪ್ರಮಾಣ ಸರಾಸರಿ ಶೇ.3.2ರಷ್ಟಿದೆ.
24 ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 10,72,845 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 5,83,12,273 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
Related Article
ದೆಹಲಿ ವಿಧಾನಸಭೆಗೂ ತಟ್ಟಿದ ಕೊರೋನಾ ಬಿಸಿ: ದೆಹಲಿ ಉಪ ಮುಖ್ಯಮಂತ್ರಿ ಸೇರಿದಂತೆ ಹಲವು ಶಾಸಕರಿಗೆ ಕೊರೋನಾ ಸೋಂಕು
ಸಂಸತ್ ಮುಂಗಾರು ಅಧಿವೇಶನ: ಮೊದಲ ದಿನವೇ 30 ಸಂಸದರಿಗೆ ಕೊರೋನಾ ಪಾಸಿಟಿವ್!
ಕೋವಿಡ್ ನಡುವೆ ವರ್ಷದ ಮಟ್ಟಿಗೆ ಸಂಸದರ ಶೇ.30 ರಷ್ಟು ಸಂಬಳ ಕಡಿತ ಸಾಧ್ಯತೆ
ಕೋವಿಡ್-19: ಚೇತರಿಕೆಯಲ್ಲಿ ಬ್ರೆಜಿಲ್ ಹಿಂದಿಕ್ಕಿದ ಭಾರತ, ವಿಶ್ವದಲ್ಲಿಯೇ ನಂಬರ್ 1
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


