ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ತೀರ್ಪು, ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ಹಾಜರಿರಬೇಕು
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 30 ರಂದು ಪ್ರಕಟಿಸಲಿದ್ದು, ಅಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿದೆ.

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 30 ರಂದು ಪ್ರಕಟಿಸಲಿದ್ದು, ಅಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿದೆ.
ನ್ಯಾಯಾಧೀಶ ಎಸ್.ಕೆ. ಯಾದವ್ ಅವರು 28 ವರ್ಷಗಳ ಹಳೆಯ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್ 30ಕ್ಕೆ ಪ್ರಕಟಿಸುವುದಾಗಿ ಬುಧವಾರ ತಿಳಿಸಿದ್ದು, ಅಂದು ಎಲ್ಲಾ 32 ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ.
ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಮತ್ತು ಬಿಜೆಪಿ ನಾಯಕರಾದ ಎಂ ಎಂ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಹಾಗೂ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
ಸೆಪ್ಟೆಂಬರ್ 1 ರಂದು ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ನಂತರ ವಿಶೇಷ ನ್ಯಾಯಾಧೀಶರು ತೀರ್ಪು ಬರೆಯಲು ಪ್ರಾರಂಭಿಸಿದರು ಎಂದು ಸಿಬಿಐ ವಕೀಲ ಲಲಿತ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಸಿಬಿಐ ಒಟ್ಟು 351 ಸಾಕ್ಷಿಗಳು ಮತ್ತು ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಕರಸೇವಕರು 1992 ರ ಡಿಸೆಂಬರ್ 6 ರಂದು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


