ದೇಶ

ಕೋವಿಡ್-19: ಒಂದೇ ದಿನ 90,123 ಮಂದಿಯಲ್ಲಿ ವೈರಸ್ ಪತ್ತೆ, ಭಾರತದಲ್ಲೀಗ 50 ಲಕ್ಷ ಮಂದಿ ಸೋಂಕಿತರು

ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಬುಧವಾರ 50 ಲಕ್ಷ ಗಡಿ ದಾಟಿದೆ. ಈ ಮೂಲಕ ಅಮೆರಿಕಾ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ 2ನೇ ರಾಷ್ಟ್ರ ಭಾರತವಾಗಿದೆ.

ಕೋವಿಡ್-19: ಒಂದೇ ದಿನ 90,123 ಮಂದಿಯಲ್ಲಿ ವೈರಸ್ ಪತ್ತೆ, ಭಾರತದಲ್ಲೀಗ 50 ಲಕ್ಷ ಮಂದಿ ಸೋಂಕಿತರು
ಸಂಗ್ರಹ ಚಿತ್ರ
Published On :

ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಬುಧವಾರ 50 ಲಕ್ಷ ಗಡಿ ದಾಟಿದೆ. ಈ ಮೂಲಕ ಅಮೆರಿಕಾ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ 2ನೇ ರಾಷ್ಟ್ರ ಭಾರತವಾಗಿದೆ. 

ಒಂದೇ ದಿನ ದೇಶದಲ್ಲಿ ಬರೋಬ್ಬರಿ 90,123 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50,20,360ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 1,290 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಈವರೆಗೂ ಸೋಂಕಿನಿಂದಾಗಿ 82,066  ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ 50,20,360 ಮಂದಿ ಸೋಂಕಿತರ ಪೈಕಿ ಈ ವರೆಗೂ 39,42,361 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶಲ್ಲಿನ್ನೂ 9,95,933 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಜಾಗತಿಕವಾಗಿ ಅತೀ ಹೆಚ್ಚು ಮಂದಿ ಗುಣಮುಖರಾದ ದೇಶಗಳ ಪೈಕಿ ಭಾರತವೂ ಒಂದೆನಿಸಿಕೊಂಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.