ಕೊರೋನಾ ವಿರುದ್ಧದ ಹೋರಾಟ ಜೀವ ಉಳಿಸುವುದಕ್ಕಾಗಿಯೇ ಹೊರತು ರಾಜಕೀಯಕ್ಕಾಗಿ ಅಲ್ಲ: ಸಂಜಯ್ ರಾವತ್
ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಸಾಕಷ್ಟು ಜನರು ಗುಣಮುಖರಾಗುತ್ತಿದ್ದಾರೆ. ನಮ್ಮ ಹೋರಾಟ ಕೊರೋನಾವನ್ನು ಮಟ್ಟಹಾಕುವುದಕ್ಕಾಗಿಯೇ ವಿನಃ ರಾಜಕೀಯಕ್ಕಾಗಿ ಅಲ್ಲ ಎಂದ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಸಾಕಷ್ಟು ಜನರು ಗುಣಮುಖರಾಗುತ್ತಿದ್ದಾರೆ. ನಮ್ಮ ಹೋರಾಟ ಕೊರೋನಾವನ್ನು ಮಟ್ಟಹಾಕುವುದಕ್ಕಾಗಿಯೇ ವಿನಃ ರಾಜಕೀಯಕ್ಕಾಗಿ ಅಲ್ಲ ಎಂದ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಗುರುವಾರ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಕೊರೋನಾ ವೈರಸ್ ಕುರಿತ ದೇಶದ ಬೆಳವಣಿಗೆ ಕುರಿತು ಮಾತನಾಡಿದ ಆರೋಗ್ಯ ಸಚಿವರು, ದೇಶದಲ್ಲಿ ದಾಖಲಾಗುತ್ತಿರುವ ಬಹುತೇಕ ಸೋಂಕು ಪ್ರಕರಣಗಳು ಮಹಾರಾಷ್ಟ್ರದಿಂದಲೇ ವರದಿಯಾಗುತ್ತಿದೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ರಾವತ್ ಅವರು, ನನ್ನ ತಾಯಿ ಹಾಗೂ ನನ್ನ ಸಹೋದರನಿಗೂ ಕೊರೋನಾ ಸೋಂಕು ತಗುಲಿದೆ. ಮಹಾರಾಷ್ಟ್ರದಲ್ಲಿ ಬಹುತೇಕ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಧರವೀಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಬಿಎಂಸಿಯ ಪರಿಣಾಮಕಾರಿ ಕಾರ್ಯಕ್ಕೆ ವಿಶ್ವ ಆರೋಗ್ಯ ಸಂಸ್ಥೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ. ನಿನ್ನೆಯಷ್ಟೇ ಕೆಲ ಸದಸ್ಯರು ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದರು, ಅಂತಹವರಿಗೆ ಈ ಮಾಹಿತಿ ನೀಡಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ.
ಎಷ್ಟೊಂದು ಸಂಖ್ಯೆಯಲ್ಲಿ ಜನರು ಹೇಗೆ ಗುಣಮುಖರಾದರೂ? ಹಪ್ಪಳ ತಿಂದು ಗುಣಮುಖರಾಗಿದ್ದಾರೆಯೇ? ಕೊರೋನಾ ವಿರುದ್ಧದ ಹೋರಾಟ ರಾಜಕೀಯ ಹೋರಾಟವಲ್ಲ, ಜನರ ಜೀವ ಉಳಿಸುವ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


