ದೇಶ

ಜನರು ಉದ್ಯೋಗವಿಲ್ಲದೆ ಎಷ್ಟು ದಿನಗಳವರೆಗೆ ಇರಬೇಕು: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ನಿರುದ್ಯೋಗ ಪ್ರಮಾಣ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಉದ್ಯೋಗ ಘನತೆಯಾಗಿದ್ದು, ಸರ್ಕಾರ ಜನರಿಗೆ ಇನ್ನು ಎಷ್ಟು ದಿನಗಳವರೆಗೆ ಉದ್ಯೋಗವನ್ನು ನಿರಾಕರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಜನರು ಉದ್ಯೋಗವಿಲ್ಲದೆ ಎಷ್ಟು ದಿನಗಳವರೆಗೆ ಇರಬೇಕು: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ರಾಹುಲ್ ಗಾಂಧಿ
Published On :

ನವದೆಹಲಿ: ನಿರುದ್ಯೋಗ ಪ್ರಮಾಣ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಉದ್ಯೋಗ ಘನತೆಯಾಗಿದ್ದು, ಸರ್ಕಾರ  ಜನರಿಗೆ ಇನ್ನು ಎಷ್ಟು ದಿನಗಳವರೆಗೆ ಉದ್ಯೋಗವನ್ನು ನಿರಾಕರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಉದ್ಯೋಗ ಕೋರಿ ಸುಮಾರು 1 ಕೋಟಿ ಜನರು ಸರ್ಕಾರದ ಪೋರ್ಟಲ್ ವೊಂದರಲ್ಲಿ ನೋಂದಾಯಿಸಿಕೊಂಡಿದ್ದಾರೆ. ಆದರೆ, ಕೇವಲ 1.77 ಲಕ್ಷ ಉದ್ಯೋಗ ಇರುವುದಾಗಿ ಮಾಧ್ಯಮವೊಂದರ ವರದಿಯನ್ನು ಟ್ವೀಟರ್ ನಲ್ಲಿ ಟ್ಯಾಗ್ ಮಾಡುವ ಮೂಲಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.

ಮೋದಿ ಸರ್ಕಾರದ ಆರ್ಥಿಕ ನಿರ್ವಹಣೆಯನ್ನು ರಾಹುಲ್ ಗಾಂಧಿ ಟೀಕಿಸಿದ್ದು, ಯುವ ಜನಾಂಗಕ್ಕೆ ಉದ್ಯೋಗ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.