ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 97,894 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 51 ಲಕ್ಷ, 83,198 ಮಂದಿ ಸಾವು
ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಒಂದೇ ದಿನ 97,894 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,18,254ಕ್ಕೆ ತಲುಪಿದೆ.

ನವದೆಹಲಿ: ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಒಂದೇ ದಿನ 97,894 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,18,254ಕ್ಕೆ ತಲುಪಿದೆ.
ಇನ್ನು ಒಂದೇ ದಿನ ದೇಶದಲ್ಲಿ ಬರೋಬ್ಬರಿ 1,132 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 83,198ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ 51,18,254 ಮಂದಿ ಸೋಂಕಿತರ ಪೈಕಿ ಈ ವರೆಗೂ 40,25,080 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 10,09,976 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಜಾಗತಿಕವಾಗಿ ಅತೀ ಹೆಚ್ಚು ಮಂದಿ ಗುಣಮುಖರಾದ ದೇಶಗಳ ಪೈಕಿ ಭಾರತವೂ ಒಂದೆನಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


