ದೇಶ

ಸುಶಾಂತ್ ಸಾವಿನ ಪ್ರಕರಣ: ನಾಲ್ವರನ್ನು ಬಂಧಿಸಿ, ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಎನ್ ಸಿಬಿ

ಡ್ರಗ್ಸ್ ವಿಚಾರವನ್ನು ಮುಂದಿಟ್ಟುಕೊಂಡು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ನಾಲ್ವರನ್ನು ಬಂಧಿಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಶಾಂತ್ ಸಾವಿನ ಪ್ರಕರಣ: ನಾಲ್ವರನ್ನು ಬಂಧಿಸಿ, ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಎನ್ ಸಿಬಿ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಡ್ರಗ್ಸ್ ವಿಚಾರವನ್ನು ಮುಂದಿಟ್ಟುಕೊಂಡು  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು  ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ನಾಲ್ವರನ್ನು ಬಂಧಿಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯೊಬ್ಬನ ಮನೆ ಮೇಲೆ ದಾಳಿ ನಡೆಸಿ, 928 ಗ್ರಾಮ್ ಚಾರಸ್ ಮತ್ತು ನಗದನ್ನು ವಶ ಪಡಿಸಿಕೊಳ್ಳಲಾಗಿದೆ.ಇನ್ನಿತರ ಮೂವರು ಶಂಕಿತರನ್ನು ಪ್ರತ್ಯೇಕವಾಗಿ ಬಂಧಿಸಿರುವ ತನಿಖಾ ದಳಿ, ಸುಮಾರು 500 ಗ್ರಾಮ್ ಗಾಂಜಾವನ್ನು ಜಪ್ತಿ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಈ ಹಿಂದೆ ತನಿಖಾ ತಂಡದಿಂದ ಬಂಧಿಸಲಾಗಿದ್ದ ಅಂಕುಶ್ ಅರೆಂಜಾ ನೀಡಿದ ಸೂಕ್ತ ಮಾಹಿತಿ ಆಧಾರದ  ಮೇಲೆ ಮುಂಬೈನ ಎನ್ ಸಿಬಿ ತಂಡ ವರ್ಸೋವಾದಿಂದ ಶಂಕಿತನೊಬ್ಬನನ್ನು ಬಂಧಿಸಿದೆ. ಮತ್ತೆ ಮೂವರು ಶಂಕಿತರನ್ನು ಬಂಧಿಸಲಾಗಿದ್ದು, ಅವರಿಂದ 500 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.