ದೇಶ

ಸಚಿವ ಸ್ಥಾನಕ್ಕೆ ರಾಜಿನಾಮೆ ನಂತರ ರಾಗ ಬದಲಿಸಿದ ಹರ್ಸಿಮ್ರತ್ ಕೌರ್ ಬಾದಲ್!

ಕೃಷಿ ಸುಧಾರಣಾ ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳದ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಈಗ ಉಲ್ಟಾ ಹೊಡೆದಿದ್ದು, ತಾವು ಮಸೂದೆಗಳು ರೈತ ವಿರೋಧಿ ಎಂದು ಹೇಳಿಯೇ ಇಲ್ಲ ಎಂದಿದ್ದಾರೆ.

ಸಚಿವ ಸ್ಥಾನಕ್ಕೆ ರಾಜಿನಾಮೆ ನಂತರ ರಾಗ ಬದಲಿಸಿದ ಹರ್ಸಿಮ್ರತ್ ಕೌರ್ ಬಾದಲ್!
ಹರ್ಸಿಮ್ರತ್ ಕೌರ್ ಬಾದಲ್
Published On :

ನವದೆಹಲಿ: ಕೃಷಿ ಸುಧಾರಣಾ  ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಕೇಂದ್ರ ಸಂಪುಟಕ್ಕೆ  ರಾಜೀನಾಮೆ ನೀಡಿದ್ದ ಶಿರೋಮಣಿ ಅಕಾಲಿ ದಳದ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಈಗ ಉಲ್ಟಾ ಹೊಡೆದಿದ್ದು, ತಾವು ಮಸೂದೆಗಳು  ರೈತ ವಿರೋಧಿ ಎಂದು ಹೇಳಿಯೇ ಇಲ್ಲ ಎಂದಿದ್ದಾರೆ. 

ಈ ಕುರಿತಂತೆ ಸಂದರ್ಶನವೊಂದರಲ್ಲಿ ಮಾತನಾಡಿದ ಬಾದಲ್ 'ಇವು ರೈತ ವಿರೋಧಿ ಮಸೂದೆ ಎಂದು ನಾನು ಹೇಳುತ್ತಿಲ್ಲ. ಆದರೆ ರೈತರು ಇದನ್ನು ಹೇಳುತ್ತಿದ್ದಾರೆ. ಹೀಗಾಗಿ ಇದರ ಬಗ್ಗೆ ಸಮಗ್ರ ಚರ್ಚೆಯಾಗಬೇಕು, ಅವರಸ ಬೇಡ ಎಂಬುದಷ್ಟೆ ತಮ್ಮ ನಿಲುವು ಅಗಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೂರು ಮಸೂದೆಗಳು ರೈತ ವಿರೋಧಿ ಎಂದು ವೈಯಕ್ತಿಕವಾಗಿ ಅನಿಸುತ್ತಿದೆಯೇ ಎಂಬ ಪ್ರಶ್ನೆಗೆ, ಅದು ಪ್ರಮುಖ ವಿಷಯವೇ ಅಲ್ಲ. ಮಸೂದೆಗಳು ರೈತರ ಪ್ರಯೋಜನಕ್ಕಾಗಿ ಸಂಸತ್ತಿನಲ್ಲಿ ಮಂಡನೆಯಾಗಿವೆ ಎಂದು ಹೊಸ ರಾಗ ಹಾಡಿದ್ದಾರೆ.

ಇನ್ನು ಹರ್ಸಿಮ್ರತ್ ಕೌರ್ ಅವರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಜಿನಾಮೆ ಅಂಗೀಕರಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಬಾದಲ್ ಅವರ ರಾಜಿನಾಮೆ ಅಂಗೀಕರಿಸಿದ್ದಾರೆ. ಜೊತೆಗೆ ಪ್ರಧಾನಿ ಅವರ ಸಲಹೆ ಮೇರೆಗೆ ತೋಮಾರ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.