ವಿವಾಹಿತೆಯನ್ನು ಅಡ್ಡಗಟ್ಟಿ ಗ್ಯಾಂಗ್ ರೇಪ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕರು!
ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದು ಅಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.

ಜೈಪುರ: ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದು ಅಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.
ಅರಣ್ಯ ಪ್ರದೇಶದ ಮೂಲಕ ಮನೆಗೆ ಹಿಂತಿರುಗುವಾಗ ಮಹಿಳೆಯನ್ನು ಆರು ಮಂದಿ ಕಾಮುಕರು ಅಡ್ಡಗಟ್ಟಿದ್ದಾರೆ. ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಅದನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಸಂತ್ರಸ್ತ ಮಹಿಳೆ ತನ್ನ ಪತಿಗೆ ವಿಷಯ ತಿಳಿಸಿದ್ದು ನಂತರ ಬಿವಾಡಿಯ ತಿಜಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಿದ್ದಾರೆ.

ಸೆಪ್ಟೆಂಬರ್ 14ರಂದೆ ಘಟನೆ ನಡೆಸಿದ್ದು ಸಂತ್ರಸ್ತೆ ಈ ವಿಚಾರವನ್ನು ಮುಚ್ಚಿಟ್ಟಿದ್ದರು. ಆದರೆ ಯಾವಾಗ ವಿಡಿಯೋ ವೈರಲ್ ಆಗಿತ್ತೋ ಈ ಬಳಿಕ ತನಗಾದ ಕಹಿ ಘಟನೆ ಬಗ್ಗೆ ಆಕೆ ಗಂಡನ ಬಳಿ ಹೇಳಿಕೊಂಡಿದ್ದಾರೆ. ಪತಿ ಧೈರ್ಯ ನೀಡಿದ ಬಳಿಕ ಅವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಮಹಿಳೆಯ ಮೇಲಿನ ಅತ್ಯಾಚಾರ ವಿಡಿಯೋವನ್ನು ಆರೋಪಿಗಳು ಜಾಲತಾಣದಲ್ಲಿ ಹರಿಬಿಟ್ಟಿದ್ದು ಇದನ್ನು ಆಧರಿಸಿ ಸದ್ಯ ಮೂವರನ್ನು ಬಂಧಿಸಲಾಗಿದ್ದು ಇನ್ನು ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


