ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯನ್ನೇ ಹಿಂದಿಕ್ಕಿದ ಗುಣಮುಖರ ಸಂಖ್ಯೆ
ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.
ಹೌದು.. ಕಳೆದ 24 ಗಂಟೆಗಳಲ್ಲಿ ಅವಧಿಯಲ್ಲಿ ದೇಶದಲ್ಲಿ 92,605 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54 ಲಕ್ಷ ಗಡಿ ದಾಟಿದೆ. ಅಂತೆಯೇ 1,133 ಮಂದಿ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ಒಟ್ಟಾರೆ ಸೋಂಕಿತರ ಪೈಕಿ ಕಳೆದ 24 ಗಂಟೆಗಳಲ್ಲಿ 94,612 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇದು ದೇಶದಲ್ಲಿ ಹೊಸ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. ಆ ಮೂಲಕ ದೇಶದಲ್ಲಿನ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಗುಣಮುಖರ ಸಂಖ್ಯೆ 43,03,044ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಇನ್ನೂ 10,10,824 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


