ದೇಶ

ರೈತರ ಸೇವೆಗೆ ಸರ್ಕಾರ ಮುಡಿಪು: ಮೋದಿ ಭರವಸೆ

ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರೈತರ ಸೇವೆಗೆ ಸರ್ಕಾರ ಮುಡಿಪು: ಮೋದಿ ಭರವಸೆ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾದ ಹಿನ್ನೆಲೆಯಲ್ಲಿ  ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಹಿಂದೆಯೂ ಹೇಳಿದ್ದೆ, ಈಗಲೂ  ಮತ್ತೊಮ್ಮೆ ಹೇಳುತ್ತಿದ್ದೇನೆ. ಎಂಎಸ್ಪಿ ವ್ಯವಸ್ಥೆ ಮುಂದುವರೆಯಲಿದೆ. ರೈತರ ಸೇವೆಗೆ ಸರ್ಕಾರ  ಮುಡಿಪಾಗಿದೆ,   ಅವರ ಆರ್ಥಿಕ ಅಭಿವೃದ್ದಿಗೆ ಏನೇನು ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ ಎಂದು ಮೋದಿ ಭರವಸೆ ನೀಡಿದ್ದಾರೆ. ಈ ಮೂಲಕ ಕನಿಷ್ಠ ಬೆಂಬಲ ಬೆಲೆ ಆಧಾರದ ಮೇಲೆ ರೈತರ ಬೆಳೆ ಖರೀದಿ ಮುಂದುವರೆಯಲಿದೆ ಎಂದೂ ಅವರು ಟ್ವೀಟ್ ಮೂಲಕ  ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು  ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳನ್ನು ಮಂಡಿಸಿ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಇದೊಂದು ಐತಿಹಾಸಿಕ ಮಸೂದೆ. ಇವು ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರಲಿದೆ. ರೈತರು ತಮ್ಮ ಉತ್ಪನ್ನಗಳನ್ನು ಯಾವುದೇ ಜಾಗದಲ್ಲಿ, ತಾವು ಬಯಸುವ ಯಾವುದೇ ವ್ಯಕ್ತಿಗೆ ಮಾರಾಟ ಮಾಡಬಹುದು ಎಂದು ತಿಳಿಸಿದರು. ತೋಮರ್ ಸಹ  ಎಂಎಸ್ಪಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.