ದೇಶ

ಮಧ್ಯಪ್ರದೇಶ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಸಚಿನ್ ಪೈಲಟ್ ಪ್ರಚಾರ

ರಾಜಸ್ಥಾನದ ಸರ್ಕಾರ ಅಸ್ಥಿರ ಪ್ರಹಸನದಲ್ಲಿ ದೇಶದ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಧ್ಯಪ್ರದೇಶದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ.

ಮಧ್ಯಪ್ರದೇಶ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಸಚಿನ್ ಪೈಲಟ್ ಪ್ರಚಾರ
ಸಚಿನ್ ಪೈಲಟ್
Published On :

ರಾಜಸ್ಥಾನದ ಸರ್ಕಾರ ಅಸ್ಥಿರ ಪ್ರಹಸನದಲ್ಲಿ ದೇಶದ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಧ್ಯಪ್ರದೇಶದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. 

28 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಬಹುತೇಕ ಸ್ಥಾನಗಳು ಗ್ವಾಲಿಯರ್ ಹಾಗೂ ಚಂಬಲ್ ಪ್ರದೇಶದಲ್ಲಿದ್ದು, ಇವು ಈಗ ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ಸಿಗ, ಸಚಿನ್ ಪೈಲಟ್ ಅವರ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಭದ್ರಕೋಟೆಯೆಂದೇ ಗುರುತಿಸಿಕೊಂಡಿವೆ.

ಉಪಚುನಾವಣೆಗೆ ಚುನಾವಣಾ ಆಯೋಗ ಇನ್ನಷ್ಟೇ ದಿನಾಂಕಗಳನ್ನು ಘೋಷಣೆ ಮಾಡಬೇಕಿದೆ. 25 ಸ್ಥಾನಗಳು ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ತೆರವುಗೊಂಡಿದೆ.

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್ ರಾಜಸ್ಥಾನದ ಮಾಜಿ ಡಿಸಿಎಂ ಪೈಲಟ್ ಅವರನ್ನು ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಮನವಿ ಮಾಡಿಕೊಂಡಿದ್ದು, ಇದಕ್ಕೆ ಪೈಲಟ್ ಸಹ ಒಪ್ಪಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.