ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ; ಕನಿಷ್ಠ 10 ಮಂದಿ ಸಾವು, 25 ಮಂದಿ ಸಿಲುಕಿರುವ ಶಂಕೆ
ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಪರಿಣಾಮ ಕಟ್ಟಡೊಳಗಿದ್ದವರ ಪೈಕಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಪರಿಣಾಮ ಕಟ್ಟಡೊಳಗಿದ್ದವರ ಪೈಕಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಾಣಿಜ್ಯ ನಗರಿ ಮುಂಬೈ ಸಮೀಪದಲ್ಲೇ ಇರುವ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಸುಮಾರು 3.30ರ ಹೊತ್ತಿನಲ್ಲಿ ಈ ಘಟನೆ ನಡೆದಿದ್ದು, 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ಧೌಡಾಯಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರರು ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಈ ವರೆಗೂ 10 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಅಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ 5 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 20 ಮಂದಿ ಸಿಲುಕಿರುವ ಸಾಧ್ಯತೆ ಇದ್ದು ಕಾರ್ಯಾಚರಣೆ ಸಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


