ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 86,961 ಹೊಸ ಸೋಂಕು ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54,87,581ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಟ್ಟಾರೆ 43,96,399 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,130 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 87,882ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 10,03,299 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ 7 ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 7,31,534 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 6,43,92,594 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
Related Article
ಕೋವಿಡ್-19 ಗುಣಮುಖರ ಪ್ರಮಾಣದಲ್ಲಿ ಅಮೆರಿಕವನ್ನು ಹಿಂದಿಕ್ಕಿದ ಭಾರತಕ್ಕೆ ಅಗ್ರಸ್ಥಾನ
ಕೊರೋನಾ ಲಸಿಕೆ ಅಭಿವೃದ್ಧಿಗೆ ಸರ್ಕಾರ ಉತ್ತೇಜನ,ಅಂತಿಮ ಹಂತದಲ್ಲಿ ಮೂರು ಪ್ರಯೋಗಗಳು-ಡಾ.ಹರ್ಷವರ್ಧನ್
ಕೋವಿಡ್-19, ಆರ್ಥಿಕತೆ ಕುಸಿತ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶಶಿ ತರೂರ್ ತೀವ್ರ ವಾಗ್ದಾಳಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


