ದೇಶ

ಕೇರಳದ ಕ್ವಾರಿಯಲ್ಲಿ ಸ್ಫೋಟ, ಕರ್ನಾಟಕ, ತಮಿಳುನಾಡಿನ ಇಬ್ಬರು ವಲಸೆ ಕಾರ್ಮಿಕರ ಸಾವು

ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಕೇರಳದ ಕ್ವಾರಿಯಲ್ಲಿ ಸ್ಫೋಟ, ಕರ್ನಾಟಕ, ತಮಿಳುನಾಡಿನ ಇಬ್ಬರು ವಲಸೆ ಕಾರ್ಮಿಕರ ಸಾವು
ಕ್ವಾರಿಯಲ್ಲಿ ಸ್ಫೋಟ
Published On :

ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 

ಕಲ್ಲು ಸ್ಫೋಟಕ್ಕೆ ಬಳಸುವ ಉದ್ದೇಶದಿಂದ ಇಲ್ಲಿನ ಕಟ್ಟಡದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಡಲಾಗಿತ್ತು. ಆದರೆ ಈ ಸ್ಫೋಟಕಗಳು ಇಂದು ಮುಂಜಾನೆ ಸ್ಫೋಟಿಸಿ ಕಟ್ಟಡದೊಳಗಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಪೆರಿಯಣ್ಣನ್ ಮತ್ತು ಕರ್ನಾಟಕ ಮೂಲದ ಡಿ  ನಾಗ ಎಂದು ಗುರುತಿಸಲಾಗಿದೆ. ಪ್ರಸ್ತುತ ಕಲಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.