ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ: 2008 ರ ಬೆಂಗಳೂರು ಸ್ಫೋಟದಲ್ಲಿ ಒಬ್ಬ ಭಾಗಿ
2008ರಲ್ಲಿ ನಡೆದಿದ್ದ ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿ ಮತ್ತು ಲಷ್ಕರ್ ಇ- ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯ ಆಧಾರದ ಮೇಲೆ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಕೇಂದ್ರಿಯ ತನಿಖಾ ತಂಡ ಸೋಮವಾರ ಬಂಧಿಸಿದೆ.

ತಿರುವನಂತಪುರ: 2008ರಲ್ಲಿ ನಡೆದಿದ್ದ ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿ ಮತ್ತು ಲಷ್ಕರ್ ಇ- ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯ ಆಧಾರದ ಮೇಲೆ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಕೇಂದ್ರಿಯ ತನಿಖಾ ತಂಡ ಸೋಮವಾರ ಬಂಧಿಸಿದೆ.
ಬಂಧಿತರನ್ನು ಉತ್ತರ ಪ್ರದೇಶದ ಗುಲ್ ನವಾಜ್ ಮತ್ತು ಕಣ್ಣೂರು ಬಳ್ಳಿಯ ಕೊಂಡತ್ ನಿವಾಸಿ ಶೋಯೆಬ್ ಆಲಿಯಾಸ್ ಪಾಜಿಲ್ ಎಂದು ಗುರುತಿಸಲಾಗಿದೆ.
ಗುಲ್ ನವಾಜ್ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಹವಾಲಾ ಚಾನೆಲ್‌ಗಳ ಮೂಲಕ ಎಲ್‌ಇಟಿಗೆ ಹಣ ಸಂಗ್ರಹಿಸಿದ್ದಾರೆ ಎಂಬ ಆರೋಪವಿದ್ದರೆ, ಶೋಯೆಬ್ 2008 ರ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಎಲ್‌ಇಟಿ ಹವಾಲಾ ಹಣ ವಹಿವಾಟು ಪ್ರಕರಣದ ಉಸ್ತುವಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೊಂದಿದ್ದರೆ, ಬೆಂಗಳೂರು ಪೊಲೀಸರ ಭಯೋತ್ಪಾದನಾ ನಿಗ್ರಹ ಕೇಂದ್ರವು 2008 ರಲ್ಲಿ ನಗರದಲ್ಲಿ ನಡೆದಿದ್ದ ಸ್ಫೋಟಗಳ ಬಗ್ಗೆ ತನಿಖೆ ನಡೆಸುತ್ತಿದೆ.
ಇಬ್ಬರು ಭಯೋತ್ಪಾದಕ ಆರೋಪಿಗಳನ್ನು ಗಲ್ಫ್‌ನಿಂದ ಗಡೀಪಾರು ಮಾಡಲಾಗಿದ್ದು, ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಕಳೆದ ಮೂರು ದಿನಗಳಲ್ಲಿ ಭಯೋತ್ಪಾದಕ ಶಂಕಿತ ಪ್ರಕರಣಗಳಿಗಾಗಿ ಕೇರಳದಿಂದ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶೋಯೆಬ್ ಭಾರತೀಯ ಮುಜಾಹಿದ್ದೀನ್ (ಐಎಂ) ಕಾರ್ಯಕರ್ತ ಮತ್ತು ಬೆಂಗಳೂರು ಸ್ಫೋಟದ ಆರೋಪಿ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


