ರಾಜ್ಯಸಭೆಯಲ್ಲಿ ಕಲಾಪ ಬಹಿಷ್ಕಾರ ನಿಲ್ಲಿಸಲು ಕೃಷಿ ಮಸೂದೆಗಳಲ್ಲಿ ಮೂರು ಬೇಡಿಕೆ ಇಟ್ಟ ಕಾಂಗ್ರೆಸ್
ಕೃಷಿ ಮಸೂದೆಗಳಿಗೆ ಮೂರು ಬೇಡಿಕೆಗಳು ಈಡೇರುವವರೆಗೂ ಪ್ರತಿಪಕ್ಷಗಳು ರಾಜ್ಯಸಭಾ ಕಲಾಪ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ತಿಳಿಸಿದ್ದಾರೆ.

ನವದೆಹಲಿ: ಕೃಷಿ ಮಸೂದೆಗಳಿಗೆ ಮೂರು ಬೇಡಿಕೆಗಳು ಈಡೇರುವವರೆಗೂ ಪ್ರತಿಪಕ್ಷಗಳು ರಾಜ್ಯಸಭಾ ಕಲಾಪ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ತಿಳಿಸಿದ್ದಾರೆ.
ಸಂಸತ್ತಿನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ಮಸೂದೆಗಳ ಅಂಗೀಕಾರದಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ ಎಂದು ಆರೋಪಿಸಿದ ಅವರು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೃಷಿ ಮಸೂದೆಗಳಿಗೆ ಅಂಕಿತ ಹಾಕಬಾರದು ಎಂದರು.
ಆದರೆ, ಒಂದು ವೇಳೆ ರಾಷ್ಟ್ರಪತಿ ಹಾಕಬೇಕಾದರೆ ಪ್ರತಿಪಕ್ಷಗಳ ಮೂರು ಬೇಡಿಕೆಗಳನ್ನು ಈಡೇರಿಸಿದರೆ ಕಲಾಪ ಬಹಿಷ್ಕಾರ ನಿಲ್ಲಿಸುವುದಾಗಿ ಹೇಳಿದರು.
ಬೇರೆ ಮಸೂದೆ ಜಾರಿಗೆ ತನ್ನಿ ಅಥವಾ ಖಾಸಗಿವರು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಗಿಂತ ಕಡಿಮೆ ದರದಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸುವುದು ಕಾನೂನುಬಾಹಿರ ಎಂದು ಪ್ರಧಾನಿ ನರೇಂದ್ರ ಮೋದಿ ಅಥವಾ ಕೃಷಿ ಸಚಿವರು ಸದನದಲ್ಲಿ ಹೇಳಲಿ ಎಂದರು.
ಸ್ವಾಮಿನಾಥನ್ ಆಯೋಗದ ವರದಿ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು, ಅಲ್ಲದೇ ಏಜೆನ್ಸಿಗಳು ಮತ್ತು ಆಹಾರ ನಿಗಮಗಳು ಕನಿಷ್ಠ ಬೆಂಬಲ ಬೆಲೆಯಡಿ ಕೃಷಿ ಉತ್ಪನ್ನಗಳನ್ನು ಖರೀದಿಸಬೇಕು ಎಂದು ಕಡ್ಡಾಯಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಹೇಳಿದರು.
ತಮ್ಮ ಈ ಬೇಡಿಕೆಗಳು ಈಡೇರುವವರೆಗೂ ಕಲಾಪ ಬಹಿಷ್ಕರಿಸುತ್ತೇವೆ. ನಾಲ್ಕನೇಯದಾಗಿ ಸಂಸದರ ಅಮಾನತನ್ನು ವಾಪಸ್ ಪಡೆಯಬೇಕು ಎಂದರು.
ಕೃಷಿ ಮಸೂದೆ ಸಂಬಂಧ ಚರ್ಚೆ ವೇಳೆಯಲ್ಲಿ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಎಂಟು ಸಂಸದರನ್ನು ಸೋಮವಾರ ಅಮಾನತು ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


