24 ಗಂಟೆಗಳಲ್ಲಿ ಭಾರತದಲ್ಲಿ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.
ಹೌದು.. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,01,468 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ದೇಶದಲ್ಲೇ ಒಂದು ದಿನದ ಗರಿಷ್ಠ ಗುಣಮುಖ ಸಂಖ್ಯೆಯಾಗಿದೆ. ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 44,97,867ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 75,083 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 55,62,664ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,053 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,75,861 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆ!
ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 90 ಸಾವಿರಕ್ಕೂ ಹೆಚ್ಚು ದಾಖಲಾಗಿದ್ದು, ಭಾನುವಾರ 93, 356 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ನಿನ್ನೆ 1,01,468 ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಭಾರತ ಜಗತ್ತಿನಲ್ಲೇ ಅತೀ ಹೆಚ್ಚು ಗುಣಮುಖರನ್ನು ಹೊಂದಿದ ದೇಶವಾಗಿದೆ. ಅಂತೆಯೇ ದೇಶದಲ್ಲಿ ಕೊರೋನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80.89ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


