ದೇಶ

ತಗ್ಗಿದ ಕೋವಿಡ್-19 ಅಬ್ಬರ: 24 ಗಂಟೆಗಳಲ್ಲಿ ದೇಶಾದ್ಯಂತ 75,083 ಹೊಸ ಸೋಂಕು ಪ್ರಕರಣಗಳು ಪತ್ತೆ

ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,96 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,053 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಗ್ಗಿದ ಕೋವಿಡ್-19 ಅಬ್ಬರ: 24 ಗಂಟೆಗಳಲ್ಲಿ ದೇಶಾದ್ಯಂತ 75,083 ಹೊಸ ಸೋಂಕು ಪ್ರಕರಣಗಳು ಪತ್ತೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,96 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,053 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 75,083 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 55,62,664ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಗುಣಮುಖರ ಸಂಖ್ಯೆ 44,97,868ಕ್ಕೆ ಏರಿಕೆಯಾಗಿದೆ. 

ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,053 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,75,861 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 9 ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 9,33,185 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 6,53,25,779 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.