ಟ್ರಂಪ್ ಭೇಟಿ ವೇಳೆ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ: ಕೇಂದ್ರ ಸರ್ಕಾರ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಿಂದ 25ರವರೆಗಿನ ಭಾರತ ಭೇಟಿ ವೇಳೆಯಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಿಂದ 25ರವರೆಗಿನ ಭಾರತ ಭೇಟಿ ವೇಳೆಯಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
ವಿದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಚ್ 4 ರಿಂದ ಕಡ್ಡಾಯವಾಗಿ ಕೋವಿಡ್-19 ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ವಿದೇಶಾಂಗ ಖಾತೆ ಸಹಾಯಕ ಸಚಿವ ವಿ. ಮುರಳೀಧರನ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಟ್ರಂಪ್ ಭೇಟಿ ವೇಳೆಯಲ್ಲಿ ಅಮೆರಿಕಾ ಅಧ್ಯಕ್ಷರ ಸಿಬ್ಬಂದಿ ಮತ್ತು ನಿಯೋಗವನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತಾ? ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾರ್ಚ್ 11 ರಿಂದ ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿತ್ತು. ವಿದೇಶಗಳಿಂದ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಚ್ 4ರಿಂದ ಕೋವಿಡ್-19 ತಪಾಸಣೆಯನ್ನು ಕಡ್ಡಾಯಪಡಿಸಲಾಯಿತು ಎಂದು ಹೇಳಿದ್ದಾರೆ.
ಟ್ರಂಪ್ ಜೊತೆಯಲ್ಲಿ ಪ್ರಥಮ ಮಹಿಳೆ ಮೆಲಾನಿಯಾ , ಪುತ್ರಿ ಇವಾಂಕ, ಅಳಿಯ ಜಾರೆಡ್ ಕುಶ್ನೇರ್ ಹಾಗೂ ಅವರ ಆಡಳಿತದ ಉನ್ನತ ಅಧಿಕಾರಿಗಳು ಭಾರತ ಭೇಟಿ ಕೈಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


