ಸುಶಾಂತ್ ಸಿಂಗ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.
ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ.
"ರಿಯಾ ಮತ್ತು ಶೋಯಿಕ್ ಚಕ್ರವರ್ತಿ ಅವರು ಎನ್‌ಡಿಪಿಎಸ್ ಪ್ರಕರಣದಲ್ಲಿ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಇದು ಸೆಪ್ಟೆಂಬರ್ 23 ರಂದು ವಿಚಾರಣೆಗೆ ಬರಲಿದೆ. ವಿಚಾರಣೆಯ ನಂತರ ಅರ್ಜಿಗಳ ವಿವರಗಳನ್ನು ಹಂಚಿಕೊಳ್ಳಲಾಗುವುದು" ಎಂದು ರಿಯಾ ಸೋದರನ ಪರ ವಕೀಲ ಸತೀಶ್ ಮನೆಶಿಂಧೆ ತಿಳಿಸಿದ್ದಾರೆ. .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


