ಕೇಂದ್ರ ಸಚಿವ ಸುರೇಶ್ ಅಂಗಡಿ ಹಠಾತ್ ನಿಧನಕ್ಕೆ ಪ್ರಧಾನಿ ಮೋದಿ, ಬಿಎಸ್ ವೈ, ಸಿದ್ದು ಸೇರಿದಂತೆ ಹಲವು ಗಣ್ಯರ ಸಂತಾಪ
ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.

ನವದೆಹಲಿ: ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.
ನಿಷ್ಟಾವಂತ ಕಾರ್ಯಕರ್ತರಾಗಿದ್ದ ಸುರೇಶ್ ಅಂಗಡಿ, ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುವಲ್ಲಿ ಶ್ರಮ ವಹಿಸಿದ್ದರು. ಅವರು ದಕ್ಷ ಸಂಸದ ಹಾಗೂ ಪರಿಣಾಮಕಾರಿ ಸಚಿವರಾಗಿದ್ದರು. ಅವರ ನಿಧನದಿಂದ ತುಂಬಾ ದು:ಖವಾಗಿದ್ದು, ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸಂತಾಪ ಸೂಚಿಸುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸ್ನೇಹಜೀವಿಯಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ಆಘಾತಕಾರಿಯಾದದ್ದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುರೇಶ್ ಅಂಗಡಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


