ದೇಶ

ರೈತರ ನಂತರ, ಸರ್ಕಾರ ಈಗ ಕಾರ್ಮಿಕರನ್ನು ಟಾರ್ಗೆಟ್ ಮಾಡಿದೆ: ರಾಹುಲ್ ಗಾಂಧಿ

ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ರೈತರ ನಂತರ, ಸರ್ಕಾರ ಈಗ ಕಾರ್ಮಿಕರನ್ನು ಟಾರ್ಗೆಟ್ ಮಾಡಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮೂರು ಪ್ರಮುಖ ಕಾರ್ಮಿಕ ಸುಧಾರಣಾ ಮಸೂದೆಗಳನ್ನು ಸಂಸತ್ತು ಬುಧವಾರ ಅಂಗೀಕರಿಸಿದ್ದು, ಅದು ಕಂಪನಿಗಳಿಗೆ ಇದ್ದ ಅಡೆತಡೆಗಳನ್ನು ತೆಗೆದುಹಾಕುತ್ತದೆ ಮತ್ತು 300 ಕಾರ್ಮಿಕರನ್ನು ಹೊಂದಿರುವ ಸಂಸ್ಥೆಗಳು ಸರ್ಕಾರದ ಅನುಮತಿಯಿಲ್ಲದೆ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಲು ಅವಕಾಶ ನೀಡುತ್ತದೆ.

ಈ ಮುಂಚೆ ಇದು 100 ಕಾರ್ಮಿಕರಿಗೆ ಮಿತಿಗೊಳಿಸಲಾಗಿತ್ತು. ಈಗ ಅದನ್ನು 300ಕ್ಕೆ ಹೆಚ್ಚಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ "ರೈತರ ನಂತರ, ಕಾರ್ಮಿಕರನ್ನು ಗುರಿಯಾಗಿಸಲಾಗಿದೆ, ಬಡವರ ಶೋಷಣೆ, 'ಸ್ನೇಹಿತರನ್ನು' ಪೋಷಿಸುವುದು, ಇದು ಮೋದಿ ಜಿ ಅವರ ನಿಯಮ" ಎಂದು ಮೂರು ಸಾಲಿನ ಪದ್ಯದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.