ಮಹಿಳೆಯರ ವಿರುದ್ಧದ ಅಪರಾಧ: ಯೋಗಿ ಸರ್ಕಾರದಿಂದ 'ಆಪರೇಷನ್ ದುರಾಚಾರಿ' ಪ್ರಾರಂಭ
ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅವರೆಡೆಗೆ ದೌರ್ಜನ್ಯ ನಡೆಸುವವರು ಚುಡಾಯಿಸುವವರ ವಿರುದ್ಧ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆಪರೇಷನ್ ದುರಾಚಾರಿಯನ್ನು ಪ್ರಾರಂಭಿಸಿದೆ.

ಲಖನೌ: ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅವರೆಡೆಗೆ ದೌರ್ಜನ್ಯ ನಡೆಸುವವರು ಚುಡಾಯಿಸುವವರ ವಿರುದ್ಧ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆಪರೇಷನ್ ದುರಾಚಾರಿಯನ್ನು ಪ್ರಾರಂಭಿಸಿದೆ.
ಸಿಎಎಯನ್ನು ವಿರೋಧಿಸಿ ಪ್ರತಿಭಟಿಸಿ, ಸಾರ್ವಜನಿಕ ಆಸ್ತಿಗಳನ್ನು ಹಾನಿ ಮಾಡುವವರ ಹೆಸರನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸಿದಂತೆಯೇ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ, ಚುಡಾಯಿಸುವ ಪುಂಡರ ಹೆಸರನ್ನು ಫೋಟೋ ಸಹಿತ ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.
ಈ ನಿಟ್ಟಿನಲ್ಲಿ ಈಗಾಗಲೇ ಸಿಎಂ ಯೋಗಿ ಆದಿತ್ಯನಾಥ್ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಮಹಿಳಾ ಪೊಲೀಸರಿಗೂ ಸಹ ಆಪರೇಷನ್ ದುರಾಚಾರಿಯಡಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳನ್ನು ನಿಯಂತ್ರಿಸುವುದಕ್ಕೆ ಯೋಗಿ ಸರ್ಕಾರ ಸೂಚಿಸಿದೆ.
ಲಖನೌ ಐಜಿ ಲಕ್ಷ್ಮಿ ಸಿಂಗ್ ಆಪರೇಷನ್ ಶಕ್ತಿಯನ್ನು ಮುನ್ನಡೆಸುತ್ತಿದ್ದು ಮಹಿಳೆಯರ ವಿರುದ್ಧ ದೌರ್ಜನ್ಯ ಎಸಗಿದ 2200 ಕ್ರಿಮಿನಲ್ ಗಳನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


