ದೆಹಲಿ ಗಲಭೆ: ಉಮರ್ ಖಲೀದ್ ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ
ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್‍ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನವದೆಹಲಿ: ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್‍ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಳೆದ ಸೆಪ್ಟೆಂಬರ್ 13ರಂದು ಬಂಧನಕ್ಕೀಡಾಗಿದ್ದ ಉಮರ್ ಖಲೀದ್ ರನ್ನು ಇಂದು ಹೆಚ್ಚುವರಿ ಸೆಷನ್ ಕೋರ್ಟ್ ನ್ಯಾಯಾಧೀಶರಾದ ಅಮಿತಾಬ್ ರಾವತ್ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಉಮರ್ ಖಲೀದ್ ರನ್ನು ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಈತ ಭಾಗಿಯಾಗಿದ್ದ ಮತ್ತು ಪ್ರಚೋದನೆ ನೀಡಿದ್ದ ಎಂದು ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದಾರೆ. ಕೆಲ ವಿದ್ಯಾರ್ಥಿಗಳನ್ನು ಪ್ರಚೋದಿಸಿ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಲು ಉಮರ್ ಖಲೀದ್ ಸೂಚಿಸಿದ್ದ ಮತ್ತು ಕೆಲವು ಕಡೆ ಈತನೂ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


