ಐಐಟಿಗಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: ಪಿಐಎಲ್ ಹಾಕಿದ್ದ ವಕೀಲರಿಗೆ 10 ಸಾವಿರ ರೂ. ದಂಡ ವಿಧಿಸಿದ 'ಸುಪ್ರೀಂ'
ಐಐಟಿಗಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಪಿಐಎಲ್ ಸಲ್ಲಿಸಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ನವದೆಹಲಿ: ಐಐಟಿಗಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಪಿಐಎಲ್ ಸಲ್ಲಿಸಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟುವುದಕ್ಕೆ ಸ್ಟೂಡೆಂಟ್ಸ್ ವೆಲ್ನೆಸ್ ಪ್ರೋಗ್ರಾಮ್ ನ್ನು ನಡೆಸಲು ಐಐಟಿಗಳಿಗೆ ನಿರ್ದೇಶನ ನೀಡಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿತ್ತು.
ಪಿಐಎಲ್ ನ್ನು ಸುಪ್ರೀಂ ಕೋರ್ಟ್ ಕ್ಷುಲ್ಲಕ ಎಂದು ಹೇಳಿದೆ. ಗೌರವ್ ಬನ್ಸಾಲ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು. ಇದು ಕ್ಷುಲ್ಲಕ ಅರ್ಜಿ, ಇದಕ್ಕೆ ಎಷ್ಟು ದಂಡ ವಿಧಿಸಬೇಕೆಂದು ನೀವೇ ಹೇಳಿ ಎಂದು ನ್ಯಾ. ಆರ್ ಎಫ್ ನಾರಿಮನ್ ಹೇಳಿದ್ದಾರೆ. ಅರ್ಜಿಯನ್ನು ತಿರಸ್ಕರಿಸಿ 10,000 ರೂಪಾಯಿ ದಂಡ ವಿಧಿಸುತ್ತಿದ್ದೇನೆ ಎಂದು ಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


