ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ
ಕೊರೋನಾ ವೈರಸ್ ನಿಂದ ಬುಧವಾರ ರಾತ್ರಿ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಗುರುವಾರ ದೆಹಲಿಯಲ್ಲಿಯೇ ನಡೆಸಲಾಯಿತು.

ನವದೆಹಲಿ: ಕೊರೋನಾ ವೈರಸ್ ನಿಂದ ಬುಧವಾರ ರಾತ್ರಿ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ
ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಗುರುವಾರ ದೆಹಲಿಯಲ್ಲಿಯೇ ನಡೆಸಲಾಯಿತು.
ಇಂದು ಸಂಜೆ ದೆಹಲಿಯ ದ್ವಾರಕಾ ಸೆಕ್ಟರ್ 24ರಲ್ಲಿರುವ ಲಿಂಗಾಯತರ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಲಿಂಗಾಯತ ವಿಧಿ ವಿಧಾನಗಳೊಂದಿಗೆ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ನೆರವೇರಿತು.
ಸುರೇಶ್ ಅಂಗಡಿ ಅವರು ಕೊರೋನಾದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಕೋವಿಡ್-19 ಶಿಷ್ಟಾಚಾರದ ಪ್ರಕಾರವೇ ಅವರನ್ನು ಮಣ್ಣು ಮಾಡಲಾಯಿತು. ರುದ್ರಭೂಮಿಗೆ ಕೆಲವೇ ಕೆಲವು ಜನರಿಗೆ ಪ್ರವೇಶಾವಕಾಶ ನೀಡಲಾಗಿತ್ತು. ಕುಟುಂಬ ವರ್ಗದವರು ಪಿಪಿಇ ಕಿಟ್ ಹಾಕಿಕೊಂಡೆ ಪೂಜಾ ವಿಧಾನಗಳನ್ನು ಪೂರೈಸಿದರು. ಬಾಳಯ್ಯ ಹೀರೇಮಠ್ ಮತ್ತು ಶ್ರೀಕಾಂತ್ ಚೌಕಿಮಠ್ ಇತರೆ ವಿಧಿ ವಿಧಾನಗಳನ್ನು ಪೂರೈಸಿದರು. ಇದೇ ವೇಳೆ ರೈಲ್ವೆ ಇಲಾಖೆ ಸಿಬ್ಬಂದಿ ಕುಶಾಲ ತೋಪು ಹಾರಿಸಿ ಅಗಲಿದ ಸುರೇಶ್ ಅಂಗಡಿ ಅವರಿಗೆ ಸರ್ಕಾರಿ ಗೌರವ ಸಲ್ಲಿಸಿದರು.
ಸುರೇಶ್ ಅಂಗಡಿಯವರ ಪತ್ನಿ ಮಂಗಳಾ, ಅವರ ಇಬ್ಬರು ಪುತ್ರಿಯರು, ಸಚಿವ ಜಗದೀಶ್ ಶೆಟ್ಟರ್, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಂಸದರಾದ ಈರಣ್ಣ ಕಡಾಡಿ, ಅಣ್ಣಸಾಹೇಬ್ ಜೊಲ್ಲೆ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಅಂಗಡಿ ಅವರ ಕುಟುಂಬ ಸದಸ್ಯರು ಮೃತದೇಹವನ್ನು ಅವರ ಸ್ವಂತ ಊರಾದ ಬೆಳಗಾವಿಗೆ ತರುವ ಪ್ರಯತ್ನ ನಡೆಸಿದರಾದರೂ, ಕೋವಿಡ್ -19 ಸಂಬಂಧಿತ ಸಾವಿನ ಪ್ರಕರಣಗಳಲ್ಲಿ ಮೃತದೇಹವನ್ನು ಸ್ಥಳಾಂತರಿಸಲು ಮಾರ್ಗಸೂಚಿ ಅನುಮತಿ ನೀಡುವುದಿಲ್ಲವಾದ್ದರಿಂದ, ಈ ಅವಕಾಶ ನಿರಾಕರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


