ದೇಶ

ಅಕ್ಬೋಬರ್ 28, ನವೆಂಬರ್ 3, 7ರಂದು ಮತದಾನ; ಮೂರು ಹಂತಗಳಲ್ಲಿ ಬಿಹಾರ ಚುನಾವಣೆ: ಚುನಾವಣಾ ಆಯೋಗ

ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಕೊನೆಗೂ ಮಹೂರ್ತ ಫಿಕ್ಸ್ ಮಾಡಿದ್ದು, ಅಕ್ಬೋಬರ್ 28, ನವೆಂಬರ್3, 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಅಕ್ಬೋಬರ್ 28, ನವೆಂಬರ್ 3, 7ರಂದು ಮತದಾನ; ಮೂರು ಹಂತಗಳಲ್ಲಿ ಬಿಹಾರ ಚುನಾವಣೆ: ಚುನಾವಣಾ ಆಯೋಗ
ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ
Published On :

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಕೊನೆಗೂ ಮಹೂರ್ತ ಫಿಕ್ಸ್ ಮಾಡಿದ್ದು, ಅಕ್ಬೋಬರ್ 28, ನವೆಂಬರ್3, 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಹಾರ ವಿಧಾನಸಭೆ ಚುನಾವಣೆ ಒಟ್ಟು ಮೂರು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಂತೆಯೇ ನವೆಂಬರ್ 3ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, 94 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಸಲಾಗುತ್ತದೆ. ಅಂತಿಮ ಮತ್ತು 3ನೇ ಹಂತದ ಚುನಾವಣೆ ನವೆಂಬರ್ 7ರಂದು ನಡೆಯಲಿದ್ದು, ಒಟ್ಟು 78 ವಿಧಾನಸಭಾ ಕ್ಷೇತ್ರಗಳಲ್ಲಿ ಅಂದು ಮತದಾನ ನಡೆಯಲಿದೆ. 

ನವೆಂಬರ್ 10ರಂದು ಮತಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಸುನಿಲ್ ಅರೋರಾ ಅವರು ಹೇಳಿದರು.

ಮತದಾನದ ಅವಧಿ 1 ಗಂಟೆ ಹೆಚ್ಚಳ
ಕೊರೋನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ಬಾರಿಯ ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ. ಈ ಹಿಂದೆ 5 ಗಂಟೆಯವರೆಗೂ ಮಾತ್ರ ಮತದಾನ ನಡೆಯುತ್ತಿತ್ತು. ಈ ನಿಯಮ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅನ್ವಯವಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.