ದೇಶ

ಕೊರೋನಾ ಪರೀಕ್ಷೆಯಲ್ಲಿ ಭಾರತ ಹೊಸ ದಾಖಲೆ, ಒಂದೇ ದಿನ 14 ಲಕ್ಷಕ್ಕೂ ಹೆಚ್ಚು ಜನರಿಗೆ ಪರೀಕ್ಷೆ!

ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯದಲ್ಲಿ ಗಮನಾರ್ಹ ವೃದ್ಧಿ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ ಬರೋಬ್ಬರಿ 14 ಲಕ್ಷಕ್ಕೂ ಹೆಚ್ಚು ಜನರ ಕೊರೋನಾ ವೈರಾಣು ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ.

ಕೊರೋನಾ ಪರೀಕ್ಷೆಯಲ್ಲಿ ಭಾರತ ಹೊಸ ದಾಖಲೆ, ಒಂದೇ ದಿನ 14 ಲಕ್ಷಕ್ಕೂ ಹೆಚ್ಚು ಜನರಿಗೆ ಪರೀಕ್ಷೆ!
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯದಲ್ಲಿ ಗಮನಾರ್ಹ ವೃದ್ಧಿ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ ಬರೋಬ್ಬರಿ 14,92,409 ಜನರ ಕೊರೋನಾ ವೈರಾಣು ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ. 

ಇದರಂತೆ ಕೊರೋನಾ ಪರೀಕ್ಷೆ ನಡೆಸುವಲ್ಲಿ ಅಮೆರಿಕಾವನ್ನು ಹಿಂದಿಕ್ಕಿರುವ ಭಾರತ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ವರೆಗೂ ದೇಶದಲ್ಲಿ ಒಟ್ಟಾರೆ 6,89,28,440 ಲಕ್ಷಕ್ಕೂ ಹೆಚ್ಚು ಜನರಿಗ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಕೊಂಚ ಮಟ್ಟಿಗೆ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 86,052 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 58,18,571 ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.