ಸೆ.29ರಂದು ಉಪ ಚುನಾವಣೆ ಕುರಿತು ನಿರ್ಧಾರ: ಕೇಂದ್ರ ಚುನಾವಣಾ ಆಯೋಗ
ಸೆಪ್ಟೆಂಬರ್ 29ರಂದು ಉಪ ಚುನಾವಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಹೇಳಿದ್ದಾರೆ.

ನವದೆಹಲಿ: ಸೆಪ್ಟೆಂಬರ್ 29ರಂದು ಉಪ ಚುನಾವಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ದಿನಾಂಕದ ಕುರಿತು ಘೋಷಣೆ ಕುರಿತು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ತೆರವಾಗಿರುವ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳ ಸ್ಥಾನಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಸೆ.29ರಂದು ತೀರ್ಮಾನಿಸಲಾಗುವುದೆಂದು ಹೇಳಿದರು.
ಕರ್ನಾಟಕದ 2, ಮಧ್ಯಪ್ರದೇಶದ 27 ಸೇರಿ ವಿವಿಧ ರಾಜ್ಯಗಳ 64 ಅಸೆಂಬ್ಲಿ ಹಾಗೂ ಬಿಹಾರದ ವಾಲ್ಮೀಕಿ, ತಮಿಳುನಾಡಿನ ಕನ್ಯಾಕುಮಾರಿ, ಕರ್ನಾಟಕದ ಬೆಳಗಾವಿ ಸೇರಿ 4 ಲೋಕಸಭಾ ಕ್ಷೇತ್ರಗಳು ಖಾಲಿ ಇವೆ. ಚತ್ತೀಸ್‌ಗಢ, ಹರಿಯಾಣ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ವಿಧಾನಸಭೆ ಮತ್ತು ಅಸ್ಸಾಂ, ಜಾರ್ಖಂಡ್, ಕೇರಳ, ನಾಗಾಲ್ಯಾಂಡ್, ತಮಿಳುನಾಡು ಮತ್ತು ಒಡಿಶಾದಲ್ಲಿ ತಲಾ ಎರಡು ಸ್ಥಾನಗಳು, ಮಣಿಪುರದಲ್ಲಿ ಐದು ವಿಧಾನಸಭೆ ಮತ್ತು ಗುಜರಾತ್ ಮತ್ತು ಉತ್ತರಪ್ರದೇಶದಲ್ಲಿ ತಲಾ ಎಂಟು ಸ್ಥಾನಗಳು ಖಾಲಿ ಇವೆ ಎಂದು ಆಯೋಗ ಮಾಹಿತಿ ನೀಡಿದೆ.
ಈಗಾಗಲೇ ಈ ಸಂಬಂಧ ಚುನಾವಣಾ ಆಯೋಗದ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಹಿಂದೆ ಬಿಹಾರ ವಿಧಾನಸಭೆ ಚುನಾವಣೆಯೊಂದಿಗೇ ಉಪ ಚುನಾವಣೆ ನಡೆಸುವಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


