ಬಿಹಾರ ಚುನಾವಣೆ: ಶೇ.50 ರಷ್ಟು ಮತದಾರರು ಸರ್ಕಾರದ ಬದಲಾವಣೆ ಬಯಸುತ್ತಿದ್ದಾರೆ!
ಬಿಹಾರ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬರತೊಡಗಿವೆ.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬರತೊಡಗಿವೆ.
ಎನ್ ಡಿಎ ಮೈತ್ರಿ ಸರ್ಕಾರ ಮುನ್ನಡೆಸುತ್ತಿರುವ ನಿತೀಶ್ ಕುಮಾರ್ ಆಡಳಿತದ ಬಗ್ಗೆ ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಶೇ.50 ರಷ್ಟು ಮಂದಿ ಈಗಿನ ಎನ್ ಡಿಎ ಸರ್ಕಾರ ಬದಲಾವಣೆಯಾಗಬೇಕೆಂದು ಬಯಸಿದ್ದಾರೆ.
ಐಎಎನ್ಎಸ್ ಸಿ-ವೋಟರ್ ನಡೆಸಿರುವ ಸಮೀಕ್ಷೆಯ ಪ್ರಕಾರ ಶೇ.56.7 ರಷ್ಟು ಮಂದಿ ನಿತೀಶ್ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದು ಈ ಸರ್ಕಾರ ಬದಲಾಗಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಶೇ.29.8 ರಷ್ಟು ಮಂದಿ ಸರ್ಕಾರದ ಬಗ್ಗೆ ಅಸಮಾಧಾನ ಹೊಂದಿದ್ದರೂ ಸಹ ಬದಲಾವಣೆಯನ್ನು ಬಯಸುತ್ತಿಲ್ಲ ಎಂದು ಹೇಳಿದ್ದಾರೆ.
ಶೇ.13.5 ರಷ್ಟು ಮಂದಿ ಮಾತ್ರ ಸರ್ಕಾರದ ಬಗ್ಗೆ ಅಸಮಾಧಾನವನ್ನೂ ಹೊಂದಿಲ್ಲ. ಸರ್ಕಾರ ಬದಲಾವಣೆಗೂ ಬಯಸುತ್ತಿಲ್ಲ, ಇದೇ ಸರ್ಕಾರ ಮುಂದುವರೆಯಬೇಕೆಂಬ ಅಭಿಪ್ರಾಯ ಹೊಂದಿದ್ದಾರೆ.
2015 ರಲ್ಲಿ ಜೆಡಿಯು ಆರ್ ಜೆಡಿ ಕಾಂಗ್ರೆಸ್ ಮೈತ್ರಿಯೊಂದಿಗೆ ಚುನಾವಣೆ ಎದುರಿಸಿ ಸರ್ಕಾರ ರಚನೆ ಮಾಡಿತ್ತು. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿದ್ದರು. ಆದರೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಆರ್ ಜೆಡಿ ಮೈತ್ರಿ ತೊರೆದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು. 25,789 ಜನರನ್ನು ಸಮೀಕ್ಷೆಗೊಳಪಡಿಸಲಾಗಿದ್ದು ಸೆ.1-25 ವರೆಗೆ ನಡೆಸಲಾಗಿದೆ. 243 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸಮೀಕ್ಷೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


