ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೋನಾ ಸೋಂಕು
ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಸ್ವಯಂ ನಿರ್ಬಂಧಕ್ಕೊಳಪಟ್ಟಿದ್ದಾರೆ.

ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಸ್ವಯಂ ನಿರ್ಬಂಧಕ್ಕೊಳಪಟ್ಟಿದ್ದಾರೆ.
ಈ ಬಗ್ಗೆ ಉಮಾಭಾರತಿ ಅವರು ಟ್ವೀಟ್ ಮಾಡಿದ್ದು, ತಾವು ಕೊರೋನಾ ಸೋಂಕಿಗೆ ತುತ್ತಾಗಿದ್ದು, ಕಳೆದ 10 ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ತಾವು ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕಿರುವುದು ಪತ್ತೆಯಾಗಿತ್ತು. ಪ್ರಸ್ತುತ ತಾವು ಹೃಷಿಕೇಶದಲ್ಲಿದ್ದು, ಇಲ್ಲಿನ ವಂದೇ ಮಾತರಂ ಕುಂಜ್ ನಲ್ಲಿ ಸ್ವಯಂ ಕ್ಲಾರಂಟೈನ್ ಆಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ಕು ದಿನಗಳ ಬಳಿಕ ಮತ್ತೆ ಟೆಸ್ಟ್ ಗೆ ಒಳಪಡುತ್ತೇನೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


