ಅಧಿಕಾರಿಗಳಿಂದಲೇ ರೈಲ್ವೇ ನಿಲ್ದಾಣದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!
ಪ್ರಯಾಣಿಕರ ರಕ್ಷಣೆ ಮಾಡಬೇಕಾದ ರೈಲ್ವೇ ಅಧಿಕಾರಿಗಳೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಭೋಪಾಲ್: ಪ್ರಯಾಣಿಕರ ರಕ್ಷಣೆ ಮಾಡಬೇಕಾದ ರೈಲ್ವೇ ಅಧಿಕಾರಿಗಳೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ಇಬ್ಬರು ರೈಲ್ವೆ ಅಧಿಕಾರಿಗಳು ಮಧ್ಯ ಪ್ರದೇಶದ ಭೋಪಾಲ್‍ನ ಮುಖ್ಯ ರೈಲ್ವೆ ನಿಲ್ದಾಣದ ಆವರಣದಲ್ಲಿಯೇ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ 45 ವರ್ಷದ ರಾಜೇಶ್ ತಿವಾರಿಯನ್ನು ಬಂಧಿಸಲಾಗಿದ್ದು, ಭೋಪಾಲ್ ರೈಲ್ವೆ ವಿಭಾಗದ ಸೆಕ್ಯೂರಿಟಿ ಕೌನ್ಸಲರ್ ಹಾಗೂ ವಿಪತ್ತು ನಿರ್ವಹಣಾ ಉಸ್ತುವಾರಿ ಹಾಗೂ ಮತ್ತೊಬ್ಬ ರೈಲ್ವೆ ಅಧಿಕಾರಿಯನ್ನು ಕೂಡ ಬಂಧಿಸಲಾಗಿದೆ ಎಂದು ಭೋಪಾಲ್ ಸೂಪರಿಂಟೆಂಡೆಂಟ್ ಆಫ್ ರೈಲ್ವೆ ಪೊಲೀಸ್(ಎಸ್‍ಆರ್ ಪಿ) ಹಿತೇಶ್ ಚೌಧರಿ ಮಾಹಿತಿ ನೀಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಯುವತಿ ಉತ್ತರ ಪ್ರದೇಶದ ಮಾಹೋಬ್‍ನವರಾಗಿದ್ದು, ತಿವಾರಿ ಯುವತಿಯ ಫೇಸ್ಬುಕ್ ಸ್ನೇಹಿತನಾಗಿದ್ದ. ಕೆಲಸ ಕೊಡಿಸುವುದಾಗಿ ಭೋಪಾಲ್ ರೈಲ್ವೆ ನಿಲ್ದಾಣದ ಪ್ರದೇಶಕ್ಕೆ ಕರೆಸಿಕೊಂಡಿದ್ದ. ಯುವತಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವೆಸ್ಟ್ ಸೆಂಟ್ರಲ್ ರೈಲ್ವೆ ಕಚೇರಿಯ ಮೊದಲ ಮಹಡಿಯಲ್ಲಿನ ರೂಂನಲ್ಲಿ ಕೂಡಿ ಹಾಕಿದ್ದ. ನಂತರ ಅವರ ಇನ್ನೊಬ್ಬ ಸ್ನೇಹಿತ ರೈಲ್ವೆ ಅಧಿಕಾರಿಯೊಂದಿಗೆ ಮತ್ತು ಬರುವ ಔಷಧಿ ಬೆರೆಸಿದ ಪಾನೀಯವನ್ನು ನೀಡಿ, ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಬಳಿಕ ಯುವತಿಗೆ ಪ್ರಜ್ಞೆ ಬಂದಿದ್ದು, ತಕ್ಷಣವೇ ರೈಲ್ವೆ ಪೊಲೀಸರನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ರೈಲ್ವೆ ಅಧಿಕಾರಿಯನ್ನು ನಾವು ಬಂಧಿಸಿದ್ದೇವೆ. ಆದರೆ ಯುವತಿ ಆತನನ್ನು ಗುರುತಿಸಲು ಕಾಯುತ್ತಿದ್ದೇವೆ ಎಂದು ರೈಲ್ವೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


