ಕೃಷಿ ಕಾನೂನುಗಳು ರೈತರ ಪಾಲಿಗೆ ಮರಣ ಶಾಸನ: ರಾಹುಲ್ ಗಾಂಧಿ
ವಿವಿಧ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಅಸಂಖ್ಯಾತ ರೈತ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿರುವ ಕೃಷಿ ಕಾನೂನುಗಳನ್ನು ಮರಣ ಶಾಸನ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆದಿದ್ದಾರೆ.

ನವದೆಹಲಿ: ವಿವಿಧ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಅಸಂಖ್ಯಾತ ರೈತ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿರುವ ಕೃಷಿ ಕಾನೂನುಗಳನ್ನು ಮರಣ ಶಾಸನ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆದಿದ್ದಾರೆ.
ಕೃಷಿ ಕಾನೂನುಗಳು ರೈತರ ಪಾಲಿನ ಮರಣ ಶಾಸನಗಳಾಗಿವೆ. ಸಂಸತ್ ಹಾಗೂ ಹೊರಗಡೆ ರೈತರ ಧ್ವನಿಯನ್ನು ಕಿತ್ತುಕೊಳ್ಳಲಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಸತ್ತಿರುವುದಕ್ಕೆ ಇದೇ ಸಾಕ್ಷಿಯಂತಿದೆ ಎಂದು ರಾಹುಲ್ ಗಾಂಧಿ ನ್ಯೂಸ್ ಪೇಪರ್ ಕ್ಲಿಪಿಂಗ್ ಶೇರ್ ಮಾಡುವ ಮೂಲಕ ಟ್ವಿಟ್ ಮಾಡಿದ್ದಾರೆ.
ಇತ್ತೀಚಿಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನಿಂದ ಅಂಗೀಕಾರಗೊಂಡಿರುವ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕುವ ಮೂಲಕ ಎಲ್ಲಾ ಮೂರು ಮಸೂದೆಗಲು ಕಾನೂನುಗಳಾಗಿ ಜಾರಿಗೆ ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


