ಕೋವಿಡ್-19: ದೇಶದಲ್ಲಿ ಒಂದೇ ದಿನ 82,170 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ, 95,542 ಮಂದಿ ಸಾವು
ಸೋಮವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 82,170 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿದಾಟಿದೆ.

ನವದೆಹಲಿ: ಸೋಮವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 82,170 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿದಾಟಿದೆ.
ಪ್ರಸ್ತುತ ದೇಶದಲ್ಲಿ 60,74,703 ಮಂದಿ ಸೋಂಕಿಗೊಳಗಾಗಿದ್ದು, ಈ ಪೈಕಿ 5,01,6521 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ದೇಶದಲ್ಲಿ 9,62,640 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುತ್ತಿದ್ದಾರೆ.
ಇನ್ನು ಕೊರೋನಾಗೆ ಒಂದೇ ದಿನ 1,039 ಮಂದಿ ಸಾವನ್ನಪ್ಪಿದ್ದು, ಮಹಾಮಾರಿ ವೈರಸ್ ಈ ವರೆಗೂ 95,542 ಜನರನ್ನು ಬಲಿಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,09,394 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 7,09,394 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 7,09,394 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.27ರವರೆಗೂ 7,19,67,230 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


