ದೇಶ

ಪತ್ನಿಯನ್ನು ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿ: ವಿಡಿಯೋ ವೈರಲ್, ಸೇವೆಯಿಂದ ವಜಾ

ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.

ಪತ್ನಿಯನ್ನು ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿ: ವಿಡಿಯೋ ವೈರಲ್, ಸೇವೆಯಿಂದ ವಜಾ
ಡಿಜಿಪಿ ಪುರುಷೋತ್ತಮ ಶರ್ಮಾ
Published On :

ಭೂಪಾಲ್:  ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.ಮಧ್ಯಪ್ರದೇಶ ಡಿಜಿಪಿ ಪುರುಷೋತ್ತಮ ಶರ್ಮಾ, ತನ್ನ ಹೆಂಡತಿ ಮೇಲೆ ಹಲ್ಲೆ ಮಾಡುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿತ್ತು.

ಅಧಿಕಾರಿಯನ್ನು ತನ್ನ ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು,  ಕಾನೂನನ್ನು ಕೈಗೆ ತೆಗೆದುಕೊಳ್ಳುವ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಶರ್ಮಾ ಪುತ್ರ ಪಾರ್ಥ, ಈ ವಿಡಿಯೋವನ್ನು ರಾಜ್ಯ ಗೃಹ ಸಚಿವ ನಾರೊತ್ತಮ್ ಮಿಶ್ರಾ ಸೇರಿದಂತೆ ಕೆಲ ಅಧಿಕಾರಿಗಳಿಗೆ ಕಳುಹಿಸಿದ್ದು, ತನ್ನ ತಂದೆ ವಿರುದ್ಧವೇ ದೂರು ದಾಖಲಿಸಿದ್ದಾರೆ.

32 ವರ್ಷಗಳಿಂದ ಆಕೆ ನನ್ನೊಂದಿಗಿದ್ದು, 2008ರಲ್ಲಿ ನನ್ನ ವಿರುದ್ಧ ದೂರು ದಾಖಲಿಸಿದ್ದಳು. ಆದರೆ, 2008ರಿಂದಲೂ ನನ್ನ ಮನೆಯಲ್ಲಿದ್ದು, ಎಲ್ಲಾ ಸೌಕರ್ಯಗಳನ್ನು ಅನುಭವಿಸಿ, ನನ್ನ ಹಣದಲ್ಲಿ ವಿದೇಶ ಸುತ್ತಿ ಬಂದಿದ್ದಾರೆ ಎಂದು ಹೆಚ್ಚುವರಿ ಡಿಜಿ ಪುರುಷೋತ್ತಮ ಶರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.