'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ': ಬಿಜೆಪಿ ಮುಖಂಡ
ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.

ಕೊಲ್ಕತ್ತಾ: ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.
ಕೋವಿಡ್-19 ರೋಗಿಗಳ ಕುಟುಂಬಗಳ ನೋವನ್ನು ಅನುಭವಿಸುವಂತೆ ಮಾಡಲು ಈ ರೀತಿ ಮಾಡುವುದಾಗಿ ದಕ್ಷಿಣ 24 ಪರಗಣದ ಬರುಯಿಪುರದಲ್ಲಿ ಭಾನುವಾರ ಸಂಜೆ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಹಜ್ರಾ ನೀಡಿರುವ ಹೇಳಿಕೆ ವಿರುದ್ಧ ಸಿಲಿಗುರಿಯಲ್ಲಿ ಟಿಎಂಸಿ ಪೊಲೀಸ್ ದೂರು ದಾಖಲಿಸಿದೆ.
ನಮ್ಮ ಪಕ್ಷದ ಕಾರ್ಯಕರ್ತರು ಕೊರೋನಾಗಿಂತಲೂ ದೊಡ್ಡ ಶತ್ರುವಾಗಿರುವ ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುತ್ತಿದ್ದಾರೆ. ಒಂದು ವೇಳೆ ನನಗೆ ಕೊರೋನಾವೈರಸ್ ತಗುಲಿದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳಲು ನಿರ್ಧರಿಸಿರುವುದಾಗಿ ಹೇಳಿದರು.
ಕೋವಿಡ್ -19 ರೋಗಿಗಳ ಶವಗಳನ್ನು ರಾಜ್ಯದಲ್ಲಿ ಅಂತ್ಯಕ್ರಿಯೆ ನಡೆಸುವ ರೀತಿ ಕರುಣಾಜನಕವಾಗಿದೆ. ಮೃತದೇಹಗಳನ್ನು ಸೀಮೆಎಣ್ಣೆಯಿಂದ ಸುಡಲಾಗುತ್ತಿದೆ. ಕೋವಿಡ್-19 ನಿಂದ ಮೃತಪಟ್ಟ ಪೋಷಕರ ಮುಖಗಳನ್ನು ಮಕ್ಕಳಿಗೆ ತೋರಿಸುತ್ತಿಲ್ಲ.ನಾವು ಸತ್ತ ಬೆಕ್ಕುಗಳು ಅಥವಾ ನಾಯಿಗಳನ್ನು ಸಹ ಆ ರೀತಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದರು.
ಅನುಪಮ್ ಹಜ್ರಾ ಅವರ ಹೇಳಿಕೆಯನ್ನು ಖಂಡಿಸಿರುವ ಹಿರಿಯ ಟಿಎಂಸಿ ಮುಖಂಡ ಸೌಗಾತೊ ರಾಯ್, ಇದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


