ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಲಕ್ಷ
24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಅಂತೆಯೇ ಈ ವರೆಗೂ 51,01,398 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ 9,47,576 ಸೋಂಕು ಪ್ರಕರಣಗಳು ಮಾತ್ರ ಇವೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 776 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 96,318ಕ್ಕೆ ಏರಿಕಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ 11,42,811 ಕೋವಿಡ್-19 ಪರೀಕ್ಷೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,42,811 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.28ರವರೆಗೂ 7,31,10,041 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


