ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ದಿನ ಗೃಹ ಬಂಧನದಲ್ಲಿ ಇಡುತ್ತೀರಿ: ಸುಪ್ರೀಂ ಕೋರ್ಟ್ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ಸಮಯ ಮತ್ತು ಯಾವ ಆದೇಶದ ಮೇಲೆ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಜಮ್ಮು-ಕಾಶ್ಮೀರ ಸರ್ಕಾರವನ್ನು ಪ್ರಶ್ನಿಸಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ಸಮಯ ಮತ್ತು ಯಾವ ಆದೇಶದ ಮೇಲೆ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಜಮ್ಮು-ಕಾಶ್ಮೀರ ಸರ್ಕಾರವನ್ನು ಪ್ರಶ್ನಿಸಿದೆ.
ಮೆಹಬೂಬ ಮುಫ್ತಿಯವರ ಮಗಳು ಇಲ್ತಿಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ನ ಇಬ್ಬರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನೆ ಮಾಡಿದೆ. ಅವರು ಜಮ್ಮು-ಕಾಶ್ಮೀರ ಸರ್ಕಾರದ ಪರವಾಗಿ ನ್ಯಾಯಾಲಯ ಮುಂದೆ ವಿಚಾರಣೆಗೆ ಹಾಜರಾಗಿದ್ದು ಮೆಹಬೂಬ ಮುಫ್ತಿ ಅವರ ಪುತ್ರಿ ಇಲ್ತಿಜಾ ಅವರ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ತಾಯಿ ಮೆಹಬೂಬ ಮುಫ್ತಿ ಅವರನ್ನು ಕೂಡಲೇ ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಕೋರಿ ಇಲ್ತಿಜಾ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಅವರ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ನಿತ್ಯ ರಾಮಕೃಷ್ಣನ್, ಮೆಹಬೂಬ ಮುಫ್ತಿ ಅವರಿಗೆ ತಮ್ಮ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯರ್ತಿ ಸಂಜಯ್ ಕಿಶನ್ ಕೌಲ್, ಕೇಂದ್ರ ಸರ್ಕಾರಕ್ಕೆ ವಿಸ್ತೃತವಾಗಿ ಪ್ರತಿಕ್ರಿಯೆ ನೀಡಲು ಒಂದು ವಾರ ಕಾಲಾವಕಾಶ ನೀಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿದರು.
ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ಕಳೆದ ವರ್ಷ ಆಗಸ್ಟ್ 5ರಂದು ರದ್ದುಮಾಡಿದ ನಂತರ ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಅನೇಕ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಕಳೆದ ಮಾರ್ಚ್ ನಲ್ಲಿ ಫಾರೂಕ್ ಅಬ್ದುಲ್ಲಾ ಮತ್ತು ಅವರ ಪುತ್ರ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


