ದೇಶ

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಸೋನಿಯಾ ಗಾಂಧಿ ಸೂಚನೆ

ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಸೋನಿಯಾ ಗಾಂಧಿ ಸೂಚನೆ
ಸೋನಿಯಾ ಗಾಂಧಿ
Published On :

ನವದೆಹಲಿ: ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, 'ಕೇಂದ್ರದ ಕೃಷಿ ಕಾನೂನುಗಳಿಗೆ ಕಡಿವಾಣ ಹಾಕುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಪರಾಮರ್ಶೆ ಮಾಡಬೇಕು ಎಂದು ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ರದ್ದತಿಗಳಂತಹ ರೈತ ವಿರೋಧಿ ನೀತಿಗಳು ಈ ಕೃಷಿ ಕಾನೂನಿನಲ್ಲಿದೆ. ಇವುಗಳ ಮೇಲೆ ನಿರ್ಬಂಧ ಹಾಕಿ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಬಿಜೆಪಿ ರೈತ ಸಮುದಾಯಕ್ಕೆ ಮಾಡುತ್ತಿರುವ ಭಾರಿ ಅನ್ಯಾಯ, ವಂಚನೆಯಿಂದ ರೈತರನ್ನು ಬಚಾವ್ ಮಾಡಬೇಕು ಎಂದೂ ಸೋನಿಯಾ ಕಿವಿಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.