ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!
ಆನ್ ಲೈನ್ ತರಬೇತಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆ: ಆನ್ ಲೈನ್ ತರಗತಿಗಳಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಸತಾರ ಜಿಲ್ಲೆಯ ಪೊಲೀಸರು ಈ ಮಾಹಿತಿಯನ್ನು ಖಚಿತಪಡಿಸಿದ್ದು, ಕರಾಡ್ ಟೌನ್ ನಿಂದ 10 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿನಿಯ ತಾಯಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ವಿದ್ಯಾರ್ಥಿನಿಗೆ ಅವರ ತಾಯಿ ಸ್ಮಾರ್ಟ್ ಫೋನ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೂ ಸಹ ಆಕೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಕೆ ಎಂ ಧುಮಾಲ್ ಆತ್ಮಹತ್ಯೆಗೆ ಸಂಬಂಧಿಸಿದ ಚೀಟಿಗಳು ಘಟನಾ ಸ್ಥಳದಲ್ಲಿ ದೊರೆತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
(ನಿಮಗೆ ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳಿಂದ ಹೊರಬರಲು ಅಥವಾ ನಿಮ್ಮ ಸ್ನೇಹಿತರಿಗೆ ಭಾವನಾತ್ಮಕ ಬೆಂಬಲ ಅಗತ್ಯವಿದ್ದಲ್ಲಿ ಎಎಎಸ್ಆರ್ ಎ ನ 24x7 ಹೆಲ್ಪ್ ಲೈನ್ 91-9820466726 ನಂಬರ್ ಗೆ ಕರೆ ಮಾಡಿ)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


