ದೇಶ

ಕೊವಿಡ್-19: ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಪಾಸಿಟಿವ್

ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊವಿಡ್-19: ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
Published On :

ಚೆನ್ನೈ: ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ.

ಜಮಾತ್ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಸ್ವಯಂ ಪ್ರೇರಿತವಾಗಿ ತಪಾಸಣೆಗೆ ಒಳಗಾಗಿ ಎಂದು ತಮಿಳುನಾಡು ಸರ್ಕಾರ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳ ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 15 ಜಿಲ್ಲೆಗಳ 110 ಮಂದಿಯ ವರದಿ ಇಂದು ಪಾಸಿಟಿವ್ ಬಂದಿದೆ. ಇನ್ನು 668 ಮಂದಿಯ ವರದಿ ಬರಬೇಕಾಗಿದೆ.

ತಮಿಳುನಾಡಿನಿಂದ ಸುಮಾರು 1500 ಮಂದಿ ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದ್ದು, ತಮಿಳುನಾಡು ಸರ್ಕಾರ ಈ ಎಲ್ಲರನ್ನು ಗುರುತಿಸಿ, ಪರೀಕ್ಷೆಗೆ ಒಳಪಡಿಸಬೇಕಾಗಿದೆ.

ಜಮಾತ್ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು 2,000ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಮಾ. 13ರಿಂದ 15ರವರೆಗೆ ಈ ಸಭೆ ನಡೆದಿತ್ತು. ಇದೀಗ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.