ಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ
ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್ವೇಯಿಂದ ಜಾರಿ ಉಂಟಾದ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ.

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್ವೇಯಿಂದ ಜಾರಿ ಉಂಟಾದ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ಮಧ್ಯದಲ್ಲಿ ಕೇಂದ್ರ ಸರ್ಕಾರದ ವಂದೇ ಭಾರತ್ ಕಾರ್ಯಕ್ರಮದಡಿಯಲ್ಲಿ ವಿದೇಶದಲ್ಲಿರುವ ಭಾರತೀಯರನ್ನು ಕರೆತರುವ ಭಾಗವಾಗಿ ಐಎಕ್ಸ್-1344, ಬಿ 737 ದುಬೈಯಿಂದ ಕಲ್ಲಿಕೋಟೆಗೆ ವಿಮಾನ ಆಗಮಿಸಿತ್ತು. ಒಟ್ಟು 190 ಪ್ರಯಾಣಿಕರು ವಿಮಾನದಲ್ಲಿದ್ದರು.
ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ. ನಾಗರಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ ಈ ಘಟನೆ ಸಂಬಂಧ ತನಿಖೆಗೆ ಆದೇಶಸಿದೆ.
2019 ರಲ್ಲೇ ಈ ರನ್ ವೇ ಯಲ್ಲಿರುವ ಸಮಸ್ಯೆಯ ಬಗ್ಗೆ ಡಿಜಿಸಿಎ ಎಚ್ಚರಿಕೆ ನೀಡಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚಿನ ವರದಿಯ ಪ್ರಕಾರ 40 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದು ರಕ್ಷಣಾ ಕಾರ್ಯ ಚುರುಕು ಪಡೆದುಕೊಂಡಿದೆ. ಕೇರಳ ಸರ್ಕಾರ 04832719493 ಸಹಾಯವಾಣಿಯನ್ನು ಪ್ರಾರಂಭಿಸಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕೇರಳದ ವಿಮಾನ ದುರಂತದಲ್ಲಿ ಉಂಟಾಗಿರುವ ಸಾವು-ನೋವುಗಳಿಂದ ದುಃಖವಾಗಿದೆ ಎಂದು ಹೇಳಿದ್ದಾರೆ.
We are deeply saddened by the tragedy of Air India Express Flight No IX 1344 at Kozhikode.
MEA helplines are open 24x7:
1800 118 797
+91 11 23012113
+91 11 23014104
+91 11 23017905
Fax: +91 11 23018158
Email: covid19@mea.gov.in
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಖಾತೆಯ ರಾಜ್ಯ ಸಚಿವ ವಿ.ಮುರಳೀಧರನ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ ಗೆ ತೆರಳುವ ಎಲ್ಲಾ ವಿಮಾನಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ಬದಲಾವಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


