ದೇಶ

ಕೋವಿಡ್ ಲಸಿಕೆ ತೆಗೆದುಕೊಂಡಿದ್ದ ಸಚಿವ ಅನಿಲ್ ವಿಜ್ ಗೆ ಕೊರೋನಾ ಪಾಸಿಟಿವ್!

ಈ ಹಿಂದೆ ಪ್ರಯೋಗಾರ್ಥ ಕೊರೋನಾ ಲಸಿಕೆಯನ್ನು ಹಾಕಿಸಿಕೊಂಡಿದ್ದ ಹರ್ಯಾಣದ ಸಚಿವರಿಗೇ ಕೊರೋನಾ ಸೋಂಕು ಒಕ್ಕರಿಸಿದೆ.

ಕೋವಿಡ್ ಲಸಿಕೆ ತೆಗೆದುಕೊಂಡಿದ್ದ ಸಚಿವ ಅನಿಲ್ ವಿಜ್ ಗೆ ಕೊರೋನಾ ಪಾಸಿಟಿವ್!
ಕೋವಾಕ್ಸಿನ್ ಲಸಿಕೆ ಪಡೆದ ಸಚಿವ ಅನಿಲ್ ವಿಜ್
Published On :

ಚಂಡೀಘಡ: ಈ ಹಿಂದೆ ಪ್ರಯೋಗಾರ್ಥ ಕೊರೋನಾ ಲಸಿಕೆಯನ್ನು ಹಾಕಿಸಿಕೊಂಡಿದ್ದ ಹರ್ಯಾಣದ ಸಚಿವರಿಗೇ ಕೊರೋನಾ ಸೋಂಕು ಒಕ್ಕರಿಸಿದೆ.

ಹೌದು.. ಹರ್ಯಾಣ ಸಚಿವ ಅನಿಲ್ ವಿಜ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಅವರೇ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಕಳೆದ 10 ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಪಡುವಂತೆ  ಮನವಿ ಮಾಡಿದ್ದಾರೆ.

ಕಳೆದ ನವೆಂಬರ್ 20ರಂದು ಕೋವ್ಯಾಕ್ಸಿನ್ ಕೊರೋನಾ ಲಸಿಕೆಯ 3ನೇ ಹಂತದ ಪರೀಕ್ಷೆಯಲ್ಲಿ ಸಚಿವ ಅನಿಲ್ ವಿಜ್ ಸ್ವತಃ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು, ಹರ್ಯಾಣದ ಆಂಬಾಲದಲ್ಲಿ ನಡೆದಿದ್ದ ಪ್ರಯೋಗಾರ್ಥ ಪರೀಕ್ಷೆಯಲ್ಲಿ ಲಸಿಕೆಯ ಒಂದು ಡೋಸ್ ಅನ್ನು ಹಾಕಿಸಿಕೊಳ್ಳುವ  ಮೂಲಕ ಪ್ರಯೋಗಕ್ಕೆ ಒಳಪಟ್ಟಿದ್ದರು.  ಕೋವಾಕ್ಸಿನ್ ಲಸಿಕೆಯ ಮೂರನೇ ಹಂತದಲ್ಲಿ ಈ ಲಸಿಕೆಯನ್ನು ಸುಮಾರು 26000 ಸಾವಿರ ಜನರ ಮೇಲೆ ಪ್ರಯೋಗಿಸಲಾಗುವುದು ಎಂದು ಸಂಸ್ಥೆ ಹೇಳಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.