ದೇಶ

ಐಐಟಿ ವಾರಣಾಸಿಯಲ್ಲಿ ಇಸ್ರೋ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ ಸ್ಥಾಪನೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಲಿರುವ ಅಲ್ಪ ಹಗೂ ದೀರ್ಘಕಾಲೀನ ಯೋಜನೆಗಳಲ್ಲಿ ಅನುಕೂಲವಾಗುವಂತೆ ಐಐಟಿ ವಾರಣಾಸಿಯಲ್ಲಿ "ಪ್ರಾದೇಶಿಕ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ" ಸ್ಥಾಪನೆ ಮಾಡುವುದಾಗಿ ಇಸ್ರೋ ಹೇಳಿದೆ. ಇದಕ್ಕಾಗಿ ಇಸ್ರೋ ವಾರಣಾಸಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಐಐಟಿ ವಾರಣಾಸಿಯಲ್ಲಿ ಇಸ್ರೋ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ ಸ್ಥಾಪನೆ
Published On :

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಲಿರುವ ಅಲ್ಪ ಹಗೂ ದೀರ್ಘಕಾಲೀನ ಯೋಜನೆಗಳಲ್ಲಿ ಅನುಕೂಲವಾಗುವಂತೆ ಐಐಟಿ ವಾರಣಾಸಿಯಲ್ಲಿ "ಪ್ರಾದೇಶಿಕ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ" ಸ್ಥಾಪನೆ ಮಾಡುವುದಾಗಿ ಇಸ್ರೋ ಹೇಳಿದೆ. ಇದಕ್ಕಾಗಿ ಇಸ್ರೋ ವಾರಣಾಸಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ವಿದ್ಯಾರ್ಥಿಗಳಲ್ಲಿ ಸಂಶೋಧನೆ ಹಾಗೂ ವೈಜ್ಞಾನಿಕ ತಿಳುವಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಈ ನಿರ್ಧಾರ ಸಹಕಾರಿಯಾಗಲಿದೆ ಎಂದು ಇಸ್ರೋ ಪ್ರಧಾನ ಕಚೇರಿಯ ಸಿಬಿಪಿಒಇ ನಿರ್ದೇಶಕ ಪಿವಿ ವೆಂಕಟಕೃಷ್ಣನ್ ಹೇಳಿದ್ದಾರೆ.

ವೆಂಕಟಕೃಷ್ಣನ್ ಹಾಗೂ ಬನಾರಸ್ ಹಿಂದೂ ವಿಶ್ವವಿದ್ಯಾನಿಕಯ (ಬಿಎಚ್ ಯು ಐಐಟಿ)ನಿರ್ದೇಶಕ ಪ್ರಮೋದ್ ಕುಮಾರ್ ಜೈನ್ ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಇದು ದೇಶದಲ್ಲಿನ ಇಸ್ರೋದ ಐದನೇ ಪ್ರಾದೇಶಿಕ ಶೈಕ್ಷಣಿಕ ಕೇಂದ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.