ಗಲ್ಲುಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹೊಸ ನಾಟಕ: ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ನಿರ್ಭಯಾ ಅಪರಾಧಿ!
ದೆಹಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾಗಿರುವ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಹೊಡೆದುಕೊಂಡು ಗಾಯಗೊಂಡಿರುವ ಘಟನೆ ನಡೆದಿದೆ.

ನವದೆಹಲಿ: ದೆಹಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾಗಿರುವ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಹೊಡೆದುಕೊಂಡು ಗಾಯಗೊಂಡಿರುವ ಘಟನೆ ನಡೆದಿದೆ.
ಕಳೆದ ಭಾನುವಾರ ಜೈಲಿನ ಗೋಡೆಗಳಿಗೆ ಅಪರಾಧಿ ವಿನಯ್ ತಲೆಯನ್ನು ಹೊಡೆದುಕೊಂಡಿದ್ದು, ಬಳಿಕ ಜೈಲು ಸಿಬ್ಬಂದಿ ತಡೆದಿದ್ದಾರೆಂದು ವರದಿಗಳು ತಿಳಿಸಿವೆ.
ಗೋಡೆಗೆ ತಲೆ ಹೊಡೆದುಕೊಂಡ ಪರಿಣಾಮ ವಿನಯ್ ತಲೆಗೆ ಅಲ್ಪ ಪ್ರಮಾಣದ ಗಾಯವಾಗಿದೆ ಎಂದು ಹೇಳಲಾಗುತ್ತಿದೆ.
ಗಲ್ಲು ಶಿಕ್ಷೆಯಾಗಿರುವ ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಜೈಲಿನಲ್ಲಿ ಉಪವಾಸ ಸತ್ಯಾಗ್ರ ನಡೆಸುತ್ತಿದ್ದಾನೆ.
ಈ ನಡುವೆ ವಿನಯ್ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ. ಇದರ ಪರಿಣಾಮ ಆತ ಗಾಯಗೊಂಡಿದ್ದಾರೆ. ಅಲ್ಲದೆ, ಮಾನಸಿಕ ಕಾಯಿಲೆಯಿಂದಲೂ ಆತ ಗಾಯಗೊಂಡಿದ್ದಾರೆ. ಹೀಗಾಗಿ ಗಲ್ಲು ಶಿಕ್ಷೆ ರದ್ದು ಮಾಡಬೇಕೆಂದು ವಿನಯ್ ಶರ್ಮಾ ಪರವಕೀಲರು ಹೇಳಿದ್ದರು. ಬಳಿಕ ವಿನಯ್ ಶರ್ಮಾನ್ನು ಸರಿಯಾಗಿ ನೋಡಿಕೊಳ್ಳುವಂತೆ ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


