ನಿರ್ಭಯಾ ಹಂತಕರ ಗಲ್ಲು ವಿಳಂಬ? ಸುಪ್ರೀಂ ಗೆ ತೆರಳಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.

ನವದೆಹಲಿ: 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.
ಗುಪ್ತಾ (25) ಗೆ ಮಾರ್ಚ್ 3ಕ್ಕೆ ಮರಣದಂಡನೆ ಶಿಕ್ಷಿ ವೆಧಿಸಲಾಗುತ್ತಿದ್ದು ಇದೇ ದಿನ ಪ್ರಕರಣದ ಇಅತ್ರೆ ಮೂವರೂ ಸಹ ಗಲ್ಲುಶಿಕ್ಷೆಗೆ ಗುರಿಯಾಗುತ್ತಿದ್ದಾರೆ. ಆದರೆ ತನಗೆ ಮರಣದಂಡನೆ ವಿಧಿಸಬಾರದು ಎಂದು ಕ್ಯುರೇಟಿವ್ ಮನವಿ ಸಲ್ಲಿಸಿರುವ ಗುಪ್ತಾ ಮರಣದಂಡನೆಗೆ ಬದಲು ಜೀವಾವಧಿ ಜೈಲು ಶಿಕ್ಷೆ ವಿಧಿಸುವಂತೆ ಕೋರಿದ್ದಾನೆ. ಗುಪ್ತಾ ಪರ ವಕೀಲರಾದ ಎ ಪಿ ಸಿಂಗ್ ನ್ಯಾಯಾಲಯದಲ್ಲಿ ತಮ್ಮ ಕಕ್ಷಿದಾರನ ಪರ ಅರ್ಜಿ ಸಲ್ಲಿಕೆ ಮಾಡಿದರು.
ಕ್ಯುರೇಟಿವ್ ಅರ್ಜಿ ಸಲ್ಲಿಸದ ಹಾಗೂ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನೂ ಸಲ್ಲಿಸದ ನಿರ್ಭಯಾ ಪ್ರಕರಣದ ಏಕೈಕ ಅಪರಾಧಿ ಗುಪ್ತಾ ಆಗಿದ್ದ.
ಡಿಸೆಂಬರ್ 16, 2012 ರಂದು, ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ನಿರ್ಭಯಾಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಇದು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


